-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Rowdies arrested- ಮನೆಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ: ಏಳು ಮಂದಿ ಪುಡಿ ರೌಡಿಗಳ ಬಂಧನ

Rowdies arrested- ಮನೆಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ: ಏಳು ಮಂದಿ ಪುಡಿ ರೌಡಿಗಳ ಬಂಧನ






ಯುವತಿ ವಿಚಾರದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.


ಕಂಕನಾಡಿ ನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಅಪರಾಧ ಕೃತ್ಯಕ್ಕೆ ಬಳಿಸಿದ ಮಾರಕಾಸ್ತ್ರಗಳು ಹಾಗೂ ದ್ವಿಚಕ್ರ ವಾಹನಗಳನ್ನೂ ವಶಕ್ಕೆ ಪಡೆಯಲಾಗಿದೆ.



ಬಂಧಿತರನ್ನು ರಂಜಿತ್, ಅವಿನಾಸ್, ಪ್ರಜ್ವಲ್, ದೀಕ್ಷಿತ್, ಹೇಮಂತ್, ಧನುಷ್ ಹಾಗೂ ಯತಿರಾಜ್ ಎಂದು ಗುರುತಿಸಲಾಗಿದೆ.












ಕಳೆದ ಮೇ 30ರಂದು ರಾತ್ರಿ ಸರಿಪಲ್ಲದ ವೀಣಾ ಎಂಬವರು ತಮ್ಮ ಮನೆಯಲ್ಲಿ ಇದ್ದಾಗ ಆರೋಪಿಗಳು ತಲವಾರು ಸಹಿತ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಮನೆಗೆ ಅಕ್ರಮವಾಗಿ ನುಗ್ಗಿ ವೀಣಾ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. 


ಅವರ ಇಬ್ಬರು ಮಕ್ಕಳು ಎಲ್ಲಿ ಎಂದು ಪ್ರಶ್ನಿಸಿ ಜಗಳವಾಡಿದ್ದಾರೆ. ಮಕ್ಕಳು ಹೊರಗೆ ಹೋಗಿದ್ದಾರೆ ಎಂದು ವೀಣಾ ಅವರು ಹೇಳಿದರೂ, ನಿಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದು ನಾನೇ.. ಏನು ಮಾಡ್ತಾರೆ, ನಿಮ್ಮ ಮಕ್ಕಳಿಬ್ಬರನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಪ್ರಮುಖ ಆರೋಪಿ ಹೇಮಂತ್ ಬೆದರಿಕೆ ಹಾಕಿದ್ದಾನೆ.



ಅಲ್ಲದೆ, ರಂಜಿತ್ ಎಂಬಾತ, ನಿಮ್ಮನ್ನೂ ಬಿಡುವುದಿಲ್ಲ ಎಂದು ಕೈಯಲ್ಲಿ ಇದ್ದ ಹರಿತವಾದ ತಲವಾರನ್ನು ಝಳಪಿಸಿದ್ದಾನೆ.


ಅಲ್ಲದೆ, ಮನೆಯಲ್ಲಿ ಇದ್ದ ಟಿವಿ. ಮಿಕ್ಸಿ, ಸೋಫಾ, ಮನೆಯ ಹಿಂಬಾಗಿಲಿಗೆ ಹಾನಿ ಮಾಡಿ ನಷ್ಟ ಉಂಟು ಮಾಡಿದ್ದಾರೆ.


ವೀಣಾ ಅವರ ಮಗಳನ್ನು ಎರಡು ವಾರದ ಹಿಂದೆ ಮೋಟರ್ ಸೈಕಲಿನಲ್ಲಿ ಕರೆದುಕೊಂಡು ಹೋಗುತ್ತಿದ್ದುದನ್ನು ನೋಡಿ ಸಹೋದರರಾದ ಆಕಾಶ್ ಮತ್ತು ಕೀರ್ತನ್ ಫೋನ್ ಮಾಡಿ ಹೇಮಂತ್‌ನನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ದ್ವೇಷದಿಂದ ಈ ಕೃತ್ಯ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಈ ಬಗ್ಗೆ ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Ads on article

Advertise in articles 1

advertising articles 2

Advertise under the article