ಕೋವಿಡ್ 19 ಸೋಂಕಿಗೆ ತುತ್ತಾದ ರೋಗಿಗಳ ಚಿಕಿತ್ಸೆ ನೆಪದಲ್ಲಿ ಖಾಸಗಿ ಆಸ್ಪತ್ರೆಗಳು ನಡೆಸುತ್ತಿರುವ ಅನ್ಯಾಯ, ಸುಲಿಗೆ, ಅಮಾನವೀಯ ನಡವಳಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತಿದ ಯುವ ಕಾಂಗ್ರೆಸ್ ನಾಯಕ ಸುಹೈಲ್ ಕಂದಕ್ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
Video_
ಈ ಬಂಧನವನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರು ನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ಪೊಲೀಸ್ ಠಾಣೆಗೆ ಭೇಟಿ ನೀಡಿದ ಶಾಸಕ ಯು.ಟಿ. ಖಾದರ್, ಮಾಜಿ ಶಾಸಕ ಜೆ.ಆರ್. ಲೋಬೋ, ಐವಾನ್ ಡಿಸೋಜ ಹಾಗೂ ಇತರರು ಸುಹೈಲ್ ಅವರ ಟೀಕೆ ಟಿಪ್ಪಣಿ ಬಗ್ಗೆ ಪೊಲೀಸರು ನಡೆಸಿದ ಬಂಧನವನ್ನು ವಿರೋಧಿಸಿದರು.