-->

A shocking news-detection of Porn Video crime- ಅಶ್ಲೀಲ ಚಿತ್ರ ನೋಡಿದ್ರೆ ಜೋಕೆ... ಇಲ್ಲಿದೆ ಒಂದು ಶಾಕಿಂಗ್ ನ್ಯೂಸ್!

A shocking news-detection of Porn Video crime- ಅಶ್ಲೀಲ ಚಿತ್ರ ನೋಡಿದ್ರೆ ಜೋಕೆ... ಇಲ್ಲಿದೆ ಒಂದು ಶಾಕಿಂಗ್ ನ್ಯೂಸ್!





ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಿರುವವರಿಗೆ ಪೊಲೀಸರು ಬಿಗ್ ಶಾಕ್ ನೀಡಿದ್ದು, ವಿವಿಧ ಪ್ರಕರಣಗಳನ್ನು ಗುರುತಿಸಿ ಆರೋಪಿಗಳ ವಿರುದ್ಧ ದೂರು ದಾಖಲಿಸಲಾಗುತ್ತಿದ್ದು, ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದವರಿಗೆ ಹಾಗೂ ತಮ್ಮದೇ ಖಾತೆಯಲ್ಲಿ ಹಂಚಿಕೊಂಡವರಿಗೆ ಪೊಲೀಸರು ಬಿಗ್ ಶಾಕ್ ನೀಡುತ್ತಿದ್ದಾರೆ.



ಮಕ್ಕಳಿಗೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳನ್ನು ನೋಡುವುದು ಭಾರತೀಯ ದಂಡ ಸಂಹಿತೆಯ ಪ್ರಕಾರ ಅಪರಾಧ. ಅದರಲ್ಲೂ ಫೇಸ್ ಬುಕ್ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವುದು ಡೌನ್ ಲೋಡ್ ಮಾಡುವುದು ಕೂಡ ಶಿಕ್ಷಾರ್ಹ ಅಪರಾಧವಾಗಿದೆ.



ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 1 ವರ್ಷದ ಅವಧಿಯಲ್ಲಿ 6 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದೆ.


ಇನ್ನೂ ಪ್ರಕರಣ ದಾಖಲಾದವರ ಪೈಕಿ ಕಾರವಾರ ತಾಲೂಕಿನ ಮಾಜಾಳಿ, ಶಿರಸಿ, ಜೊಯಿಡಾದವರು ಕೂಡ ಸೇರಿದ್ದಾರೆ. ಬಂಧಿತರಲ್ಲಿ ಬಹುತೇಕರು ನಡು ವಯಸ್ಸಿನವರು ಎಂದು ಪೊಲೀಸರು ತಿಳಿಸಿದ್ದಾರೆ.







ಸುಮಾರು ಎರಡು-ಮೂರು ವರ್ಷಗಳ ಹಿಂದೆ ಫೇಸ್ ಬುಕ್ ಗೆ ಮಕ್ಕಳ ಅಶ್ಲೀಲ ವಿಡಿಯೋ ಹಾಕಿದ್ದರೂ ಅಂತಹ ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚಿ ಕೇಸು ದಾಖಲಿಸಿದ್ದಾರೆ. 



ಸುಪ್ರೀಂ ಕೋರ್ಟ್ ನ ಆದೇಶದ ಮೇರೆಗೆ ಕೇಂದ್ರ ಸರ್ಕಾರವು ಮಕ್ಕಳ ಮೇಲಿನ ದೌರ್ಜನ್ಯ ತಡೆಯಲೆಂದು ರಾಷ್ಟ್ರೀಯ ಅಪರಾಧ ದಾಖಲೆ ಘಟಕದ ಅಡಿಯಲ್ಲಿ ಪ್ರತ್ಯೇಕ ತಂಡ ರಚಿಸಿದ್ದು, ವಿಶೇಷ ತಂಡ ದೇಶದಲ್ಲಿಯೇ ಇಂತಹ ಪ್ರಕರಣಗಳನ್ನು ಪತ್ತೆ ಮಾಡುವ ಕೆಲಸ ಮಾಡುತ್ತಿದೆ.

Ads on article

Advertise in articles 1

advertising articles 2

Advertise under the article