-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Bus Service Begins- ಮಂಗಳೂರು-ಕಾಸರಗೋಡು ಬಸ್ ಸಂಚಾರ ಷರತ್ತುಬದ್ಧ ಆರಂಭ

Bus Service Begins- ಮಂಗಳೂರು-ಕಾಸರಗೋಡು ಬಸ್ ಸಂಚಾರ ಷರತ್ತುಬದ್ಧ ಆರಂಭ






ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡಿಗೆ ಷರತ್ತಿಗೊಳಪಟ್ಟು ಬಸ್ ಸಂಚಾರ ಆರಂಭಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.


ಕೇರಳ ರಾಜ್ಯದ ಸದ್ಯದ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರ್ಕಾರವು ಈ ಬಗ್ಗೆ ಬಸ್ ಸಂಚಾರದ ಅನುಮತಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಸರಗೋಡು - ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ದಿನಾಂಕ: 19-07-2021 ರಿಂದ ಈ ಕೆಳಕಂಡ ಪರತ್ತಿಗೊಳಪಟ್ಟು ಅನುಮತಿಸಲಾಗಿದೆ.



ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ. ಸೋಂಕು ಹರಡುವಿಕೆ ತಡೆಗಟ್ಟಲು ಹೆಚ್ಚಿನ ಜಾಗರೂಕತೆ ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅಭಿಪ್ರಾಯಪಟ್ಟಿದ್ದಾರೆ.



ಷರತ್ತುಗಳು ಹೀಗಿವೆ.

1) ಸರ್ಕಾರಿ ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ ಕನಿಷ್ಠ 1 (ಒಂದು) ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನಗೆಟಿವ್ ವರದಿಯನ್ನು ಆಯಾ ಬಸ್‌ ನಿರ್ವಾಹಕರು ಖಚಿತಪಡಿಸಕೊಳ್ಳತಕ್ಕದ್ದು,


2) ಕೋವಿಡ್‌ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮಾಸ್ಕ್, ಸ್ಯಾನಿಟೈಸ್, ಸಾಮಾಜಿಕ ಅಂತರ)


ಈ ಷರತ್ತು ಪಾಲಿಸದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article