ಪ್ರಸ್ತುತ ಪರಿಸ್ಥಿತಿಯಲ್ಲಿ ಕೋವಿಡ್ 19 ಪಿಡುಗಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಸವಾಲುಗಳನ್ನು ಎದುರಿಸುತ್ತಿದ್ದು ಈ ಸಂದರ್ಭದಲ್ಲಿ ಪೋಷಕರು ಮತ್ತು ಖಾಸಗಿ ಶಾಲಾ ಕಾಲೇಜುಗಳ ಮಧ್ಯೆ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ.
ಈ ಕುರಿತು ಪೋಷಕರು ಮತ್ತು ಖಾಸಗಿ ಶಾಲೆಗಳ ನಡುವೆ ಶಾಲಾ ಶುಲ್ಕದ ಕುರಿತು ಇನ್ನೂ ಗೊಂದಲವಿರುವುದು ಮತ್ತು ಈ ಬಗ್ಗೆ ಚರ್ಚೆಗಳು ಆಗುತ್ತಲೇ ಇದೆ, ಇದು ಮಕ್ಕಳ ಶಿಕ್ಷಣದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತಿದೆ.
ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಈ ವಿಷಯವನ್ನು ಗಂಭಿರವಾಗಿ ಪರಿಗಣಿಸಿ ಪರಿಸ್ಥಿತಿಯನ್ನು ನಿಯಂತ್ರಿಸಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ.
ಯಾವ ಶಾಲೆಯಲ್ಲಿ, ಯಾವಾಗ ಮತ್ತು ಎಷ್ಟು ಶಾಲಾ ಶುಲ್ಕವನ್ನು ಕಟ್ಟಬೇಕು ಎಂಬ ಸೂಕ್ತ ಮಾಹಿತಿಯನ್ನು ಜಿಲ್ಲಾಡಳಿತ ಸಂಗ್ರಹಿಸಿ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡಬೇಕು ಹಾಗೂ ಶಾಲಾಮಟ್ಟದಲ್ಲಿ ಆಯಾಯ ಶಾಲಾ ಶುಲ್ಕದ ವಿವರಗಳನ್ನು ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಒತ್ತಾಯಿಸಿದೆ.


 
 
 
 
 
 
 
 
 
 
 
 
 
 
 
 
