-->
Media Academy Nominated- ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಕೆ.ಸದಾಶಿವ ಶೆಣೈ, ಸದಸ್ಯರಾಗಿ ತಗಡೂರು, ಬಾಳ ಜಗನ್ನಾಥ ಶೆಟ್ಟಿ ನೇಮಕ

Media Academy Nominated- ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಕೆ.ಸದಾಶಿವ ಶೆಣೈ, ಸದಸ್ಯರಾಗಿ ತಗಡೂರು, ಬಾಳ ಜಗನ್ನಾಥ ಶೆಟ್ಟಿ ನೇಮಕ
ಕರ್ನಾಟಕ ಸರಕಾರದ ಕನ್ನಡ ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಸಚಿವಾಲದ ಅಧೀನಕ್ಕೊಳಪಟ್ಟ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಅಧ್ಯಕ್ಷರಾಗಿ ಕೆ.ಸದಾಶಿವ ಶೆಣೈ ನೇಮಕ ಮಾಡಲಾಗಿದೆ. ಸರಕಾರ ಈ ಬಗ್ಗೆ ನೇಮಕಾತಿ ಆದೇಶ ಹೊರಡಿಸಿದೆ ಎಂದು ಕನ್ನಡ ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಜೆಸಿಂತಾ ತಿಳಿಸಿದ್ದಾರೆ.ಅಕಾಡೆಮಿಯ ನಿಯಮಾವಳಿಯ ರೀತ್ಯ ಪ್ರದತ್ತವಾಗಿರುವ ಅಧಿಕಾರದಂತೆ ಅಕಾಡೆಮಿಗೆ ನೂತನ ಅಧ್ಯಕ್ಷರನ್ನು ಒಳಗೊಂಡು ಒಟ್ಟು ಹತ್ತು ಸದಸ್ಯರನ್ನು ನೇಮಕಾತಿ ಮಾಡಿದೆ. ಕೆ.ಸದಾಶಿವ ಶೆಣೈ ಅಧ್ಯಕ್ಷರಾಗಿ ಮತ್ತು ಗೋಪಾಲ ಸಿ.ಯಡಗೆರೆ, ಕೆ.ಕೆ ಮೂರ್ತಿ, ಶಿವಕುಮಾರ್ ಬೆಳ್ಳಿತಟ್ಟೆ, ಕೂಡ್ಲಿ ಗುರುರಾಜ್, ಶಿವಾನಂದ ತಗಡೂರು, ಸಿ.ಕೆ ಮಹೇಂದ್ರ, ಜಗನ್ನಾಥ ಶೆಟ್ಟಿ ಬಾಳ, ದೇವೇಂದ್ರಪ್ಪ ಕಪನೂರು, ಕೆ.ವಿ ಶಿವಕುಮಾರ್ ಸದಸ್ಯರಾಗಿರುತ್ತಾರೆ.
ಜಗನ್ನಾಥ ಶೆಟ್ಟಿ ಬಾಳ:

ಪತ್ರಿಕೋದ್ಯಮದಲ್ಲಿ ಕಳೆದ ಮೂರು ದಶಕಗಳ ಸೇವೆ ಸಲ್ಲಿಸಿರುವ ಜಗನ್ನಾಥ ಶೆಟ್ಟಿ ಬಾಳ ಜಯಕಿರಣ ಕನ್ನಡ ದೈನಿಕದಲ್ಲಿ ಕಳೆದ ಎರಡು ದಶಕಗಳಿಂದ ಹಿರಿಯ ವರದಿಗಾರ ಸೇವೆ ಸಲ್ಲಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಡಬ್ಲ್ಯೂಜೆಎಸ್) ಇದರ ದ.ಕ ಜಿಲ್ಲೆಯ ರಾಜ್ಯ ಸಮಿತಿ ಪ್ರತಿನಿಧಿಯಾಗಿದ್ದಾರೆ. ಈ ಹಿಂದೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿದ್ದು 2018ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, 2008ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ಈ ಹಿಂದೆ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಆಗಿದ್ದ ದ.ಕ ಜಿಲ್ಲಾ ಬೆಳ್ತಂಗಡಿ ಮೂಲತಃ ಸದಾಶಿವ ಶೆಣೈ, ಸದ್ಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಜಗನ್ನಾಥ ಶೆಟ್ಟಿ ನೇಮಕಾತಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಆಫ್ ಮಂಗಳೂರು, ಮಂಗಳೂರು ಪತ್ರಿಕಾ ಭವನ ಟ್ರಸ್ಟ್ ದಕ್ಷಿಣ ಕನ್ನಡ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಪದಾಧಿಕಾರಿಗಳು, ಸದಸ್ಯರು ಅಭಿನಂದಿಸಿದ್ದಾರೆ.

Ads on article

Advertise in articles 1

advertising articles 2

Advertise under the article