ಮಂಗಳೂರು: ಜಿಲ್ಲೆಯ 2ನೇ ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸ ಅಭ್ಯರ್ಥಿಯಿಂದ ತುಂಬಲು ಸರ್ಕಾರವು ನಿರ್ಧರಿಸಿದ್ದು ಅರ್ಹ ಆಸಕ್ತರಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳು ಜಿಲ್ಲಾಧಿಕಾರಿಯವರ ಕಾನೂನು ಶಾಖೆಯಲ್ಲಿ ಲಭ್ಯವಿರುತ್ತದೆ ಅರ್ಜಿ ಯೊಂದಿಗೆ ಸಲ್ಲಿಸಬೇಕಾಗಿರುತ್ತದೆ.
ಅರ್ಜಿದಾರರ ವಿದ್ಯಾರ್ಹತೆ ಹುಟ್ಟಿದ ದಿನಾಂಕ ಜಾತಿ ವರ್ಗ ಮತ್ತು ಹತ್ತು ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ ಅವಧಿ ಮತ್ತು ಅನುಭವಗಳ ಬಗ್ಗೆ ಪುರಾವೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕಾಗಿರುತ್ತದೆ.
ವಿಶೇಷ ಅರ್ಹತೆಗಳು ಇದ್ದಲ್ಲಿ ಈ ಬಗ್ಗೆ ದಾಖಲೆಗಳನ್ನು ಲಗ್ಗತ್ತಿಸಿರಬೇಕು.
ಅರ್ಜಿ ಸಲ್ಲಿಸಲು ಜುಲೈ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಯವರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
