-->
Temple open from today- ಭಾನುವಾರದಿಂದ ಪ್ರಾರ್ಥನಾ ಮಂದಿರಗಳ ಆರಂಭ, ಪೂಜೆ, ಪ್ರಸಾದಕ್ಕೆ ವಿಘ್ನ ನಿವಾರಣೆ!

Temple open from today- ಭಾನುವಾರದಿಂದ ಪ್ರಾರ್ಥನಾ ಮಂದಿರಗಳ ಆರಂಭ, ಪೂಜೆ, ಪ್ರಸಾದಕ್ಕೆ ವಿಘ್ನ ನಿವಾರಣೆ!


ರಾಜ್ಯದ ಎಲ್ಲ ದೇವಸ್ಥಾನ, ಮಸೀದಿ ಮತ್ತು ಚರ್ಚುಗಳು ಸೇರಿದಂತೆ ಪ್ರಾರ್ಥನಾ ಮಂದಿರಗಳಲ್ಲಿ ಇಂದಿನಿಂದ (25-07-2021)ರಿಂದ ಪ್ರಾರ್ಥನೆ, ಪೂಜೆ ಮತ್ತು ಪ್ರಸಾದ ವಿತರಣೆ ಸಾಂಗವಾಗಿ ನಡೆಯಲಿದೆ.ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಠ-ಮಂದಿರ, ದೇವಸ್ಥಾನ, ಮಸೀದಿ ಹಾಗೂ ಚರ್ಚ್‌ ಸಹಿತ ಪ್ರಾರ್ಥನಾ ಮಂದಿರಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಇದೀಗ ಅದಕ್ಕೆ ಅವಕಾಶ ಕಲ್ಪಿಸಲಾಗಿದೆ.ರಾಜ್ಯದ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಈ ಬಗ್ಗೆ ಮಾಹಿತಿ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಸೂಕ್ತ ಆದೇಶ ಹೊರಡಿಸಿದ್ದೇನೆ ಎಂದು ಹೇಳಿದ್ದಾರೆ.ಈ ಬಗ್ಗೆ ಸರ್ಕಾರಿ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸದ್ಯ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಯಾವುದೇ ಉತ್ಸವ, ಮೆರವಣಿಗೆ ಮತ್ತು ಸಭೆಗಳಿಗೆ ಅವಕಾಶ ನೀಡಿಲ್ಲ ಎಂದು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.


Ads on article

Advertise in articles 1

advertising articles 2

Advertise under the article