-->
Vasanth Bangera- ಜಿ.ಪಂ. ತಾಪಂ. ಚುನಾವಣೆ: SC-STಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯ- ವಸಂತ ಬಂಗೇರ

Vasanth Bangera- ಜಿ.ಪಂ. ತಾಪಂ. ಚುನಾವಣೆ: SC-STಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯ- ವಸಂತ ಬಂಗೇರ
ಬೆಳ್ತಂಗಡಿ: ಚುನಾವಣಾ ಆಯೋಗ ಘೋಷಣೆ ಮಾಡಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣಾ ಮೀಸಲಾತಿ ಅವೈಜ್ಞಾನಿಕವಾಗಿದೆ. ಬೆಳ್ತಂಗಡಿಯ ಇತಿಹಾಸದಲ್ಲಿಯೇ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಂದೇ ಒಂದು ಕ್ಷೇತ್ರವನ್ನು ಮೀಸಲಿಡದೆ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಆರೋಪಿದ್ದಾರೆ.


ಬೆಳ್ತಂಗಡಿಯಲ್ಲಿ ಮಾತನಾಡಿದ ಅವರು, "ಬೆಳ್ತಂಗಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು 40,958 ಜನಸಂಖ್ಯೆ ಇದೆ. ಹೀಗಿದ್ದರೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕನಿಷ್ಟ ಒಂದು ಕ್ಷೇತ್ರವನ್ನೂ ಮೀಸಲಿಟ್ಟಿಲ್ಲ. ಇದರಲ್ಲಿ ಸ್ಥಳೀಯ ಶಾಸಕ ಹರೀಶ್ ಪೂಂಜ ನೇರವಾಗಿ ಶಾಮೀಲಾಗಿದ್ದಾರೆ" ಎಂದು ಅವರು ಆರೋಪಿಸಿದರು.


Watch This Video:
ಬೆಳ್ತಂಗಡಿ ತಾಲೂಕಿನ ಕೆಲವೆಡೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರವನ್ನು ಸಾಮಾನ್ಯ ಮಹಿಳೆಯರಿಗೆ ಮೀಸಲು ಇಡಲಾಗಿದೆ. ಧರ್ಮಸ್ಥಳ ತಾಲ್ಲೂಕು ಪಂಚಾಯಿತಿ ಕ್ಷೇತ್ರದಲ್ಲಿ ಈ ಹಿಂದೆ ಕೂಡ ಹಿಂದುಳಿದ ವರ್ಗ (ಎ) ಮೀಸಲಾತಿ ಇದ್ದು, ಈ ಬಾರಿ ಅದೇ ಮೀಸಲಾತಿಯನ್ನು ಮುಂದುವರಿಸಲಾಗಿದೆ ಎಂದು ಅವರು ಹೇಳಿದರು.

Ads on article

Advertise in articles 1

advertising articles 2

Advertise under the article