Allahabad High Court- ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮ: ಅಲಹಾಬಾದ್ ಹೈಕೋರ್ಟ್ ತೀರ್ಪು


ಲಕ್ನೋ: ಮದುವೆಯಾಗುವುದಾಗಿ ನಂಬಿಸಿ ಹೆಣ್ಣಿನ ಮೇಲೆ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 


ಇಂತಹ ಪ್ರಕರಣಗಳನ್ನು ನಿರ್ವಹಿಸಲು ಕಠಿಣ ಕಾನೂನು ರೂಪಿಸುವ ಅಗತ್ಯವಿದೆ ಎಂದು ಅದು ಅಭಿಪ್ರಾಯಪಟ್ಟಿದೆ.


ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ಆರೋಪಿಯ ವಿರುದ್ಧ ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು.





ಈ ದೂರಿಗೆ ಸಂಬಂಧಿಸಿದಂತೆ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮಾನ ಎಂದು ಅಭಿಪ್ರಾಯಪಟ್ಟಿದೆ.