ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಅವರು ಮಂಗಳೂರಿನ ಅಂಬೇಡ್ಕರ್ ಭವನದ ರೂವಾರಿ ಎಂದು ಕಾಂಗ್ರೆಸ್ ನಿಯೋಗ ಹೇಳಿದೆ, ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್,ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಭಾಸ್ಕರ್ ಮೊಯಿಲಿ, ಹರಿನಾಥ್, ಬ್ಲಾಕ್ ಅಧ್ಯಕ್ಷರಾದ ಪ್ರಕಾಶ್ ಸಾಲ್ಯಾನ್, ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷರಾದ ವಿಶ್ವಾಸ್ ದಾಸ್, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷರಾದ ಶಾಹುಲ್ ಹಮೀದ್, ಪರಿಶಿಷ್ಟ ವರ್ಗಗಳ ಘಟಕದ ಜಿಲ್ಲಾ ಅಧ್ಯಕ್ಷರಾದ ಶೇಖರ್ ಕುಕ್ಕೇಡಿ, ಮಹಾನಗರ ಪಾಲಿಕೆಯ ವಿಪಕ್ಷ ನಾಯಕರಾದ ವಿನಯ್ ರಾಜ್ ಮೊದಲಾದವರು ಇದ್ದರು.
ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷರಾದ ಲೋರೆನ್ಸ್ ಡಿ ಸೋಜ, ಸೇವಾದಾಳ ಜಿಲ್ಲಾ ಅಧ್ಯಕ್ಷರಾದ ಜೋಕಿಂ ಡಿ ಸೋಜ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.