-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Awareness programme Alvas - ಆಳ್ವಾಸ್‌ನಲ್ಲಿ ಮಹಿಳಾ ಸುರಕ್ಷತ ಅಭಿಯಾನ: ತುರ್ತು ಸ್ಪಂದನಾ ವ್ಯವಸ್ಥೆಯ ಜಾಗೃತಿ ಕಾರ್ಯಕ್ರಮ

Awareness programme Alvas - ಆಳ್ವಾಸ್‌ನಲ್ಲಿ ಮಹಿಳಾ ಸುರಕ್ಷತ ಅಭಿಯಾನ: ತುರ್ತು ಸ್ಪಂದನಾ ವ್ಯವಸ್ಥೆಯ ಜಾಗೃತಿ ಕಾರ್ಯಕ್ರಮ




ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಹಿಳಾ ಸುರಕ್ಷತಾ ಅಭಿಯಾನದ ಭಾಗವಾಗಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ತುರ್ತು ಸ್ಪಂದನಾ ವ್ಯವಸ್ಥೆಯ ಕುರಿತು ಜಾಗೃತಿ ನೀಡಲಾಯಿತು.







ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದ ಪಣಂಬೂರು ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಪ್ರಸಾದ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಮಹಿಳೆಯರಿಗೆ ಸೂಕ್ತ ಸುರಕ್ಷತೆ ಒದಗಿಸಲು ಪೋಲಿಸ್ ಇಲಾಖೆ ಸದಾ ಸಿದ್ಧವಾಗಿದೆ. ಮಹಿಳೆಯರಿಗೆ ಯಾವುದೇ ರೀತಿಯ ಅಭದ್ರತೆ ಪರಿಸ್ಥಿತಿ ಎದುರಾದರೆ, ತಕ್ಷಣ ತುರ್ತು ಸಹಾಯ ವಾಣಿ 112ಕ್ಕೆ ಡಯಲ್ ಮಾಡಿ ಪೊಲೀಸರ ಸಹಾಯವನ್ನು ಪಡೆಯಬಹುದು ಎಂದು ಮಾಹಿತಿ ನೀಡಿದರು.



ಜಾಗೃತಿ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ದಿನೇಶ್ ಕುಮಾರ್, ಉಪ ನಿರೀಕ್ಷಕರಾದ ಸುದೀಪ್ ಹಾಗೂ ದಿವಾಕರ ರೈ, ಎಎಸ್‍ಐ ಕಾಂತಪ್ಪ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.


ಈ ಜಾಗೃತಿ ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ಉಪನ್ಯಾಸಕರು ಹಾಗೂ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article

ಸುರ