
bus fare hike opposed- ಬಸ್ ದರ ಏರಿಕೆಗೆ ವಿರೋಧ: ಜಿಲ್ಲಾಧಿಕಾರಿಗೆ ಸಮಾನ ಮನಸ್ಕ ಪಕ್ಷ, ಸಂಘಟನೆಗಳ ಮನವಿ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಂಚರಿಸುವ ಖಾಸಗಿ ಬಸ್ ಗಳ ಪ್ರಯಾಣ ದರ ವಿಪರೀತ ಏರಿಕೆಗೆ ಅವಕಾಶ ನೀಡಿರುವ ಜಿಲ್ಲಾ ಸಾರಿಗೆ ಪ್ರಾಧಿಕಾರದ ನಿರ್ಧಾರವನ್ನು ವಿವಿಧ ರಾಜಕೀಯ ಪಕ್ಷಗಳು, ಸಮಾನ ಮನಸ್ಕ ಸಂಘಟನೆಗಳು ವಿರೋಧಿಸಿವೆ.
ಈ ನಿರ್ಧಾರವನ್ನು ಮರು ಪರಿಶೀಲಿಸಬೇಕು, ಜನರಿಗೆ ಆಗಿರುವ ಹೊರೆಯನ್ನು ತಗ್ಗಿಸಬೇಕು ಎಂದು ಈ ಸಂಘಟನೆಗಳು ಆಗ್ರಹಿಸಿವೆ.
ತಕ್ಷಣವೇ ಸಂಘ ಸಂಸ್ಥೆಗಳ, ರಾಜಕೀಯ ಪಕ್ಷಗಳ ಸಭೆ ಕರೆದು ಅಭಿಪ್ರಾಯ ಪಡೆಯುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರನ್ನು ಭೇಟಿ ಮಾಡಿದ ಜನಪರ ಸಂಘಟನೆಗಳ ಜಂಟಿ ನಿಯೋಗ ಒತ್ತಾಯಿಸಿವೆ.
ಕಾಂಗ್ರೆಸ್, ಸಿಪಿಐಎಂ, ಸಿಪಿಐ, ಜೆಡಿಎಸ್ ಪಕ್ಷಗಳ, ಡಿಎಸ್ಎಸ್, ಡಿವೈಎಫ್‌ಐ ಮುಂತಾದ ಜನಪರ ಸಂಘಟನೆಗಳ ಜಂಟಿ ನಿಯೋಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿತು.