ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಸೋಮವಾರದಿಂದ ನಡೆಯಲಿದೆ.
ಆಗಸ್ಟ್ 2ರಿಂದ 14ರ ವರೆಗೆ ನಡೆಯಲಿದ್ದು, ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗದ ಕುಲ ಸಚಿವ ಪ್ರೊ. ಪಿ.ಎಲ್. ಧರ್ಮ ಸ್ಪಷ್ಟಪಡಿಸಿದ್ದಾರೆ.
ಕೇರಳದ ವಿದ್ಯಾರ್ಥಿಗಳು ಸೇರಿದಂತೆ ಯಾರೂ ಆತಂಕ ಪಡಬೇಕಾಗಿಲ್ಲ. ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಪರೀಕ್ಷೆಗಳ ವೇಳಾಪಟ್ಟಿ ಸೋಮವಾರದಿಂದ ನಡೆಸಲು ವೇಳಾಪಟ್ಟಿ ನಿಗದಿಪಡಿಸಲಾಗಿದೆ.
ಒಂದು ವೇಳೆ, ಅನಿವಾರ್ಯ ಕಾರಣಗಳಿಂದ ಗೈರುಹಾಜರು ಆದರೆ ಅಂತಹವರಿಗೆ ಇನ್ನೊಂದು ವೇಳಾಪಟ್ಟಿ ಮಾಡಿ ದಿನಾಂಕವನ್ನು ಶೀಘ್ರದಲ್ಲಿ ಘೋಷಿಸಲಾಗುವುದು ಎಂದು ಅವರು ಹೇಳಿದ್ದಾರೆ.
