-->
Jobs in Judiciary: ದ್ವಿತೀಯ ದರ್ಜೆ ಸಹಾಯಕ ಹುದ್ದೆ: ಆನ್‌ಲೈನ್ ಅರ್ಜಿಗೆ ಹೈಕೋರ್ಟ್ ಅಧಿಸೂಚನೆ, ಸೆಪ್ಟೆಂಬರ್ 24 ಕೊನೇ ದಿನ

Jobs in Judiciary: ದ್ವಿತೀಯ ದರ್ಜೆ ಸಹಾಯಕ ಹುದ್ದೆ: ಆನ್‌ಲೈನ್ ಅರ್ಜಿಗೆ ಹೈಕೋರ್ಟ್ ಅಧಿಸೂಚನೆ, ಸೆಪ್ಟೆಂಬರ್ 24 ಕೊನೇ ದಿನ


142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಕರ್ನಾಟಕ ಹೈಕೋರ್ಟ್ ಅಧಿಸೂನೆ ಹೊರಡಿಸಿದೆ. ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 24ರಂದು ಕೊನೆಯ ದಿನವಾಗಿದೆ.

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ವೆಬ್‌ ಸೈಟ್‌ ಮೂಲಕ ಅರ್ಜಿಸಲ್ಲಿಸಬಹುದಾಗಿದೆ. ಈ ಕೆಳಗಿನ ಲಿಂಕ್ ಬಳಸಬಹುದು.

https://karnatakajudiciary.kar.nic.in/recruitment.php


ಅಭ್ಯರ್ಥಿಗಳ ಆಯ್ಕೆಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಸೇವಾ ಮತ್ತು ನೇಮಕಾತಿ ಷರತ್ತುಗಳು) ನಿಯಮಗಳು, 1973 ಮತ್ತು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಆಯ್ಕೆಯ ಮೂಲಕ ನೇರ ನೇಮಕಾತಿ) ನಿಯಮಗಳು, 1984 ಇವುಗಳ ಅನುಸಾರವಾಗಿ ಮಾಡಲಾಗುವುದು.


ಕನಿಷ್ಟ ವಿದ್ಯಾರ್ಹತೆ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ / ಕಲೆ / ವಾಣಿಜ್ಯ / ವ್ಯವಹಾರ ನಿರ್ವಹಣೆ (Business Management)/ ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯಗಳ ಪದವಿಯಲ್ಲಿ, ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಟ ಶೇಕಡ 55 ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 50 ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು ಮತ್ತು ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರತಕ್ಕದ್ದು.


ವೇತನ ಶ್ರೇಣಿ:

ಕರ್ನಾಟಕ ಉಚ್ಚ ನ್ಯಾಯಾಲಯದ (ಅಧಿಕಾರಿ ಮತ್ತು ನೌಕರರ) ಪರಿಷ್ಕ್ರತ ವೇತನ ಶ್ರೇಣಿ ನಿಯಮ 2018 ಅನುಸಾರ ಅಂಗೀಕೃತ ಭತ್ಯೆಗಳೊಂದಿಗೆ `25500 - 81100 (ದರ್ಜೆ-4).

ಹೆಚ್ಚಿನ ವಿವರಗಳಿಗೆ ಆಸಕ್ತರು ಮತ್ತು ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಬಳಸಬಹುದು.

https://karnatakajudiciary.kar.nic.in/recruitment.php

Ads on article

Advertise in articles 1

advertising articles 2

Advertise under the article