-->

Appointment in Delhi Karnataka Bhavana- ದೆಹಲಿ ಕರ್ನಾಟಕ ಭವನ ನೇಮಕಾತಿ: ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯುವಿಕೆ 2ನೇ ಪಟ್ಟಿ ಪ್ರಕಟ

Appointment in Delhi Karnataka Bhavana- ದೆಹಲಿ ಕರ್ನಾಟಕ ಭವನ ನೇಮಕಾತಿ: ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯುವಿಕೆ 2ನೇ ಪಟ್ಟಿ ಪ್ರಕಟ



ನವದೆಹಲಿ: ನವದೆಹಲಿಯ ಕರ್ನಾಟಕ ಭವನದಲ್ಲಿ ವಿವಿಧ ವೃಂದಗಳಲ್ಲಿ ಖಾಲಿಯಿರುವ 32 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದಕ್ಕಾಗಿ ದಿನಾಂಕ: 20-02-2021ರಂದು ಅಧಿಸೂಚನೆ ಹೊರಡಿಸಲಾಗಿತ್ತು.


ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆ ಪಟ್ಟಿಯಂತೆ 2021ರ ಆಗಸ್ಟ್ 24 ರಂದು ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ದಾಖಲೆ ಪರಿಶೀಲನೆ ಮತ್ತು ಅನ್ವಯಿಸುವ ಹುದ್ದೆಗಳಿಗೆ ಪ್ರಾವೀಣ್ಯತೆ ಪರೀಕ್ಷೆ ನಡೆಸಲಾಗಿದೆ.


ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯುವಿಕೆ ಪಟ್ಟಿ ಹಾಗೂ ಹೆಚ್ಚಿನ ಮಾಹಿತಿಯನ್ನು 2021ರ ಆಗಸ್ಟ್ 27ರಂದು ಪ್ರಕಟಿಸಲಾಗಿದ್ದು, ವಿವರದ ಮಾಹಿತಿಗಾಗಿ www.karnatakabhavan.karnataka.gov.in ವೀಕ್ಷಿಸಬಹುದಾಗಿದೆ. 


ಬಾಧಿತರಾಗಬಹುದಾದ ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಯನ್ನು ಸೆಪ್ಟೆಂಬರ್ 04ರ ಸಂಜೆ 5-30ರೊಳಗೆ ಲಿಖಿತವಾಗಿ ಅಥವಾ ಇಮೇಲ್ ಮೂಲಕ ಸಲ್ಲಿಸಬಹುದಾಗಿದೆ ಎಂದು ನೇರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರು ಹಾಗೂ ನವದೆಹಲಿಯ ಕರ್ನಾಟಕ ಭವನದ ಉಪ ನಿವಾಸಿ ಆಯುಕ್ತರೂ ಆದ ಎಚ್.ಪ್ರಸನ್ನ ತಿಳಿಸಿದ್ದಾರೆ. 

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article