ವಾರ್ಡ್ ಸಮಿತಿಗಳ ರಚನೆಯಲ್ಲಿ ಭಾರೀ ಪಕ್ಷಪಾತ ನಡೆದಿದೆ. ಸಮರ್ಥರ, ಸಾಮಾಜಿಕ ಕಾರ್ಯಕರ್ತರ ಅರ್ಜಿಗಳನ್ನು ಕಾರಣವಿಲ್ಲದೆ ತಿರಸ್ಕರಿಸಲಾಗಿದೆ. ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಇದೆಲ್ಲವೂ ಪಾಲಿಕೆ ಆಯುಕ್ತರ ಮೇಲುಸ್ತುವಾರಿಯಲ್ಲಿ ನಡೆದಿದ್ದು, ಆಯುಕ್ತರು ಬಿಜೆಪಿಯ ಏಜೆಂಟ್‌ರಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದ್ದಾರೆ.
ಮಹಾನಗರ ಪಾಲಿಕೆಯ ಆಯುಕ್ತರು ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದಾರೆ. ಅವರು ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಲೋಬೋ ಆರೋಪಿಸಿದ್ದಾರೆ.
ವೇದವ್ಯಾಸ ಕಾಮತ್ ಅಧ್ಯಕ್ಷರಾಗಿರುವ ಸೇವಾಂಜಲಿ ಟ್ರಸ್ಟ್‌ನ್ನು ಸಮಿತಿಗೆ ಸೇರ್ಪಡೆಗೊಳಿಸಿರುವುದು ಇದಕ್ಕೆ ಸ್ಪಷ್ಟ ಉದಾಹರಣೆ ಎಂದು ಅವರು ತಮ್ಮ ವಾದವನ್ನು ಸಮರ್ಥಿಸಿಕೊಂಡರು.
ಸುದ್ದಿಗೋಷ್ಠಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುರೇಶ್ ಬಳ್ಳಾಲ್, ಮಾಜಿ ಉಪ ಮೇಯರ್ ಮಹಮ್ಮದ್ ಕುಂಜತ್ತಬೈಲ್, ಮಾಜಿ ಮೇಯರ್ ಮಹಾಬಲ ಮಾರ್ಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲಿಯಾನ್, ಟಿ.ಕೆ. ಸುಧೀರ್, ಸದಾಶಿವ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
