-->
Nalin may step down as bjp state chief? - ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ಮುಖ ಹುಡುಕಾಟ: ನಳಿನ್ ಸ್ಥಾನಕ್ಕೆ ಬಂದಿದೆ ಕುತ್ತು?

Nalin may step down as bjp state chief? - ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ಮುಖ ಹುಡುಕಾಟ: ನಳಿನ್ ಸ್ಥಾನಕ್ಕೆ ಬಂದಿದೆ ಕುತ್ತು?


2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರದ ಸಿದ್ಧತೆಯಲ್ಲಿ ತೊಡಗಿದೆ. ಇದರ ಬೆನ್ನಲ್ಲೇ ರಾಜ್ಯದ ಪಕ್ಷ ಸಂಘಟನೆಯಲ್ಲಿ ದೊಡ್ಡ ಬದಲಾವಣೆ ಮಾಡುವ ಸಾಧ್ಯತೆಗಳು ನಿಚ್ಚಳವಾಗಿದೆ. ಈ ಬದಲಾವಣೆಯ ಭಾಗವಾಗಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಇಳಿಸುವ ಸಾಧ್ಯತೆಗಳಿವೆ.


2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಸಾಧಿಸಲು ರಾಜ್ಯ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಹಾಗಾಗಿ ಈಗಲೇ ಆರೆಸ್ಸೆಸ್ ಚಟುವಟಿಕೆ ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವ ಸಂದರ್ಭದಲ್ಲಿಯೇ ನಳಿನ್ ಕುಮಾರ್ ಕಟೀಲ್ ಅವರನ್ನೂ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸುವ ಬಗ್ಗೆ ವದಂತಿಗಳು ಹರಿದಾಡಿದ್ದವು. ಆದರೆ, ಈಗನ ಒಂದು ಮೂಲಗಳ ಪ್ರಕಾರ, ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸುವ ಬಗ್ಗೆ ಆರೆಸ್ಸೆಸ್ ಪ್ರಮುಖರು ಚಿಂತಿಸಿದ್ದಾರೆ.ಈ ವಿಚಾರವನ್ನು ಸ್ವಯಂ ನಳಿನ್ ಕುಮಾರ್ ಕಟೀಲ್ ಅವರ ಜೊತೆ ಆರೆಸ್ಸೆಸ್ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ. 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಪಕ್ಷದೊಳಗೆ ಸೂಕ್ತ ಬದಲಾವಣೆ ಮಾಡುವುದಾಗಿ ತಿಳಿಸಲಾಗಿದೆ.ಆರೆಸ್ಸೆಸ್ ಸಭೆಯಲ್ಲಿ ಈ ಬಗ್ಗೆ ಕಠಿಣ ನಿರ್ಧಾರ ಕೈಗೊಂಡರೆ, ಅದಕ್ಕೆ ಸಿದ್ಧರಾಗಿರುವಂತೆ ನಳಿನ್ ಅವರಿಗೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟವಾದ ಚಿತ್ರಣ ದೊರೆಯುವ ಸಾಧ್ಯತೆಗಳಿವೆ.

Ads on article

Advertise in articles 1

advertising articles 2

Advertise under the article