-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
accused arrested after 36 years- 36 ವರ್ಷದ ಹಿಂದಿನ ಅಪರಾಧ: ಮೂರುವರೆ ದಶಕ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

accused arrested after 36 years- 36 ವರ್ಷದ ಹಿಂದಿನ ಅಪರಾಧ: ಮೂರುವರೆ ದಶಕ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್



36 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.



1985ರಲ್ಲಿ ನಡೆದಿದ್ದ ಮನೆಗೆ ನುಗ್ಗಿ ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿ ಲಿಂಗಪ್ಪ, ತಂದೆ: ಬಾಬು ಪೂಜಾರಿ ಎಂಬಾತ ಭಾಗಿಯಾಗಿದ್ದ. ಬಳಿಕ ಪೊಲೀಸರ ಕಣ್ಣಿಗೆ ಮಣ್ಣೆರಚಿ ಕಳೆದ ಮೂರುವರೆ ದಶಕಗಳಿಂದ ತಲೆಮರೆಸಿಕೊಂಡಿದ್ದ.


ಶಿವಮೊಗ್ಗದಲ್ಲಿ 5 ವರ್ಷಗಳಿಂದ ಅಟೋ ಚಾಲಕನಾಗಿದ್ದ. ನಂತರ ಮಂಗಳೂರಿನ ತಣ್ಣೀರು ಬಾವಿ ಎಂಬಲ್ಲಿಗೆ ಬಂದು ತನ್ನ ಹೆಸರನ್ನು ರೆಹಮತ್‌ ಖಾನ್‌ , ತಂದೆ: ಅಮ್ಮು ಸಾಹೇಬ್‌ ಎಂಬುದಾಗಿ ಬದಲಾಯಿಸಿಕೊಂಡು ಅನ್ಯಕೋಮಿನ ಯುವತಿಯನ್ನು ಮದುವೆಯಾಗಿದ್ದ.


ತಣ್ಣೀರಿ ಬಾವಿಯಲ್ಲಿ ವಾಸವಾಗಿದ್ದು, ನ್ಯಾಯಾಲಯ ಹೊರಡಿಸಿದ್ದ ವಾರಂಟ್‌ ದಸ್ತಗಿರಿಗೆ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದ.


ಸುಮಾರು 29 ವರ್ಷಗಳ ಕಾಲ ತಣ್ಣೀರು ಬಾವಿಯಲ್ಲಿ ಕಪ್ಪು ಚಿಪ್ಪು ( ಸೆಲ್ಫಿಸ್‌ ) ವ್ಯಾಪಾರ ಮಾಡಿಕೊಂಡಿದ್ದು, ನಂತರ ಸುಮಾರು 3 ವರ್ಷಗಳಿಂದ ಓಶಿಯನ್‌ ಕಂಪೆನಿಯಲ್ಲಿ ಕಂನ್ಸಟ್ರಕ್ಷನ್‌ ಕೆಲಸವನ್ನು ಮುಂಡಗೋಡಿ, ಹುಬ್ಬಳ್ಳಿ, ಬೆಳಗಾಂ ಮುಂತಾದ ಕಡೆ ಮಾಡಿಕೊಂಡಿದ್ದ.


ಸುಮಾರು ಒಂದು ವಾರದಿಂದ ಮಂಗಳೂರಿನ ತಿರುವೈಲ್‌ ಗ್ರಾಮ , ವಾಮಂಜೂರು ಹಾಲಿ ವಿಳಾಸಕ್ಕೆ ಬಂದಿದ್ದವನನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.


ಪುತ್ತೂರು ನಗರ ಠಾಣಾ ಹೆಚ್‌ಸಿ 322 ಪರಮೇಶ್ವರವರು ಮತ್ತು ಹೆಚ್‌ಸಿ 1993 ಕೃಷ್ಣಪ್ಪ ರವರು ಈ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ