-->
Rapist teacher arrested- ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಸುಬ್ರಹ್ಮಣ್ಯ ಪ್ರೌಢಶಾಲಾ ಶಿಕ್ಷಕನ ಬಂಧನ

Rapist teacher arrested- ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಸುಬ್ರಹ್ಮಣ್ಯ ಪ್ರೌಢಶಾಲಾ ಶಿಕ್ಷಕನ ಬಂಧನ

ವಿದ್ಯೆ ಕಲಿಸಿಕೊಡಬೇಕಾದ ಶಿಕ್ಷಕನೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಸುಬ್ರಹ್ಮಣ್ಯದ ಶಿಕ್ಷಕನೊಬ್ಬ ತನ್ನ ಶಿಷ್ಯೆ ಮೇಲೆ ಪೈಶಾಚಿಕ ಕೃತ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.ಅತ್ಯಾಚಾರದ ಆರೋಪಕ್ಕೆ ಒಳಗಾಗಿರುವ ಶಿಕ್ಷಕನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪೋಕ್ಸೊ ಕಾಯ್ದೆ ಪ್ರಕಾರ ಕೇಸು ದಾಖಲಿಸಲಾಗಿದೆ.


ಆರೋಪಿ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಕೃತ್ಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.ಆರೋಪಿ ಶಿಕ್ಷಕ ಸಂಸ್ಥೆಯೊಂದ ಪ್ರೌಢಶಾಲಾ ವಿಭಾಗದ ಶಿಕ್ಷಕ. ರಾಯಚೂರು ಮೂಲದ ಗುರುರಾಜ್ ಬಂಧಿತ ವ್ಯಕ್ತಿ. ಈತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೋಕ್ಸೊ ಕಾಯ್ದೆಯಡಿ ಕೇಸು ದಾಖಲಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ads on article

Advertise in articles 1

advertising articles 2

Advertise under the article