School begins?- ಶಾಲೆ ಆರಂಭಕ್ಕೆ ಮುಹೂರ್ತ ನಿಗದಿ: ಕೊರೋನಾ ಕಡಿಮೆ ಇದ್ದಲ್ಲಿ ತರಗತಿ, ಸಿಎಂ ನಿರ್ದೇಶನ





ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಮುಂದಿನ ಎರಡು ವಾರಗಳವರೆಗೆ ಈಗಿರುವ ನಿಯಮಗಳೇ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.


ತಜ್ಞರ ಸಮಿತಿಯೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೊವಿಡ್ 2ನೇ ಅಲೆ ಇನ್ನೂ ಪೂರ್ಣವಾಗಿಲ್ಲ. ಕೊವಿಡ್ ಅಲೆ ಕಡಿಮೆ ಇದ್ದರೂ 1800ವರೆಗೂ ಪ್ರಕರಣಗಳು ದಾಖಲಾಗುತ್ತಿವೆ. ಈ ನಡುವೆ ಮುಂಜಾಗೃತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು.





ಪಾಸಿಟಿವಿಟಿ 2%ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯಲಾಗುವುದು. ಪೋಷಕರು, ಶಿಕ್ಷಕರು, ಸಿಬ್ಬಂದಿಗೆ ಲಸಿಕೆ ಹಾಕಬೇಕು, ಶಾಲೆ ಆರಂಭವಾದ ನಂತರ ಶೇಕಡ 2 ರಷ್ಟು ಪಾಸಿಟಿವಿಟಿ ದರ ಜಾಸ್ತಿ ಆದರೆ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.


ದಕ್ಷಿಣ ಕನ್ನಡ, ಕಲಬುರ್ಗಿ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ.

BREAKING NEWS
Loading latest news...
Join our WhatsApp Channel Powered By : Online Pudu