ಮಂಗಳೂರು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿಬಿಎ ಕೋರ್ಸ್ ಪುನರಾರಂಭ

 



ಮಂಗಳೂರು: ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2021-22 ನೇ ಸಾಲಿನಲ್ಲಿ ಬಿಬಿಎ ಪದವಿ ತರಗತಿಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ.

 

ಬಿಬಿಎ ಪದವಿ ತರಗತಿಯ   ಸಾಲಿನ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಕಾಲೇಜು ಕಛೇರಿಯಿಂದ ಅರ್ಜಿಯನ್ನು ಪಡೆದುಕೊಳ್ಳಬಹುದು. ಮಂಗಳೂರು ವಿಶ್ವವಿದ್ಯಾನಿಲಯದ ನಿಯಮಾವಳಿ ಪ್ರಕಾರ ಪ್ರವೇಶ ಪ್ರಕ್ರಿಯೆ ನಡೆಯಲಿದ್ದು  ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್ಸೈಟ್- www.universitycollegemangalore.com ಗೆ ಭೇಟಿ ನೀಡಬಹುದು ಅಥವಾ 0824-2424760 ಗೆ ಕರೆ ಮಾಡಬಹುದು, ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.