ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಚನ್ನಿ

 



ನವದೆಹಲಿ: ಪಂಜಾಬ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ  ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ನೇಮಕ ಮಾಡಲಾಗಿದೆ.

 

 ಪಂಜಾಬ್ ನಲ್ಲಿ ಮುಖ್ಯಮಂತ್ರಿಯಾಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ನ 80 ಶಾಸಕರ ಪೈಕಿ 50 ಶಾಸಕರು ಅಮರೀಂದರ್ ಸಿಂಗ್ ಅವರ ನಾಯಕತ್ವಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದರು.

 

ಇದೀಗ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಚರಣ್ ಜಿತ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಚರಣ್ ಜಿತ್  ಸಿಂಗ್ ಚನ್ನಿ ಅವರು ಈ ಹಿಂದೆ ಪಂಜಾಬ್ ನ ತಾಂತ್ರಿಕ ಶಿಕ್ಷಣ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಅವರು ಟ್ವೀಟ್ ಮೂಲಕ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ನೂತನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದಾರೆ.