
Action sought against Dharmendra- ಗಾಂಧಿ ಹತ್ಯೆ ಸಮರ್ಥಿಸಿ ಸವಾಲು ಎಸೆದ ಹಿಂದೂ ಮಹಾಸಭಾದ ಧರ್ಮೇಂದ್ರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ: SDPI ಒತ್ತಾಯ
ಮಂಗಳೂರು: ವಿವಾದಾತ್ಮಕ ಹೇಳಿಕೆ ನೀಡಿರುವ ಹಿಂದೂ ಮಹಾಸಭಾ ನಾಯಕ ಧರ್ಮೇಂದ್ರ ವಿರುದ್ಧ ಕಠಿಣ ಕ್ರಮಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಒತ್ತಾಯಿಸಿದ್ದಾರೆ.
ಮಂಗಳೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ್ದ ಧರ್ಮೇಂದ್ರ ನಂಜನಗೂಡಿನಲ್ಲಿ ಬಿಜೆಪಿ ಸರ್ಕಾರದ ಆದೇಶದಂತೆ ದೇವಸ್ಥಾನ ಕೆಡವಿದ ವಿಚಾರದಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯವಾದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹತ್ಯೆಯನ್ನು ಧರ್ಮೇಂದ್ರ ಸಮರ್ಥಿಸಿದ್ದು, ಆ ಹತ್ಯೆಯನ್ನು ನಾವೇ ಮಾಡಿದ್ದು ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಇಂತಹ ಕೃತ್ಯವನ್ನು ಇನ್ನೂ ಮುಂದುವರಿಸುತ್ತೇವೆ ಎಂದು ಬಹಿರಂಗ ಹೇಳಿಕೆ ಕೊಟ್ಟು ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತಂದ ಹಿಂದೂ ಮಹಾಸಭಾದ ನಾಯಕ ಧರ್ಮೇಂದ್ರ ನ ವಿರುದ್ಧ ಪೋಲಿಸರು ದೇಶದ್ರೋಹದ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.