ಇತ್ತೀಚೆಗೆ ಬಹಳಷ್ಟು ಜನಪ್ರಿಯವಾದ 'ಮನಿಕೆ ಮಾಗೆ ಹಿತೆ' ಎಂಬ ಶ್ರೀಲಂಕನ್ ಹಾಡೊಂದರ ಕವರ್ ವರ್ಷನ್ ಅನ್ನು ಆಳ್ವಾಸ್ ಪದವಿ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಅಸೀಮ ದೋಳ ಅವರು ಹಾಡುವ ಮೂಲಕ 'ಯೂಟ್ಯೂಬ್'ನಲ್ಲಿ ಹೆಚ್ಚಿನ ವೀಕ್ಷಣೆ ಪಡೆದಿದ್ದಾರೆ.
ಇತ್ತೀಚೆಗೆ ಯೋಹಾನಿ ಹಾಗೂ ಸತೀಶನ್ ಎಂಬವರು ಇದೇ ಹಾಡಿನ ಕವರ್ ವರ್ಷನ್ ಹಾಡಿ ಎಂಟು ಕೋಟಿಗೂ ಅಧಿಕ ವೀಕ್ಷಕರನ್ನು ಸೆಳೆದಿದ್ದರು. ಈ ಸಾಧನೆಯಿಂದ ಪ್ರೇರೇಪಿತರಾದ ಅಸೀಮ 'ಮನಿಕೆ ಮಾಗೆ ಹಿತೆ' ಹಾಡನ್ನು ಹಾಡಿದ್ದಾರೆ.
ಅಸೀಮ ಅವರ ಶ್ರೀಲಂಕಾದ ಸ್ನೇಹಿತೆಯರಾದ ತತ್ ಸರಣಿ ಮೆಂಡಿಸ್ ಹಾಗೂ ನಿಪುಣಿ ತಾರುಕ ಅವರ ಸಹಕಾರದೊಂದಿಗೆ ಹಾಡಿನ ಸಾಹಿತ್ಯವನ್ನು ಕಲಿತಿದ್ದಾರೆ. ಕವರ್ ಹಾಡಿನ ನಿರ್ದೇಶನವನ್ನು ಪ್ರಿಯಾಂಕ ಪೂಜಾರ್ ಮಾಡಿದ್ದು, ಗುಣೇಶ್ ಭಾರತೀಯ ಹಾಗೂ ಗ್ರೇಶಲ್ ಕಳಿಯಾಂಡ ಹಾಡಿನ ರೆಕಾರ್ಡಿಂಗ್ ಮತ್ತು ಚಿತ್ರೀಕರಣ ಮಾಡಿದ್ದಾರೆ.
'ಯೂಟ್ಯೂಬ್'ನಲ್ಲಿ ಪ್ರಸಾರವಾದ ಕೇವಲ ಎರಡೇ ದಿನಗಳಲ್ಲಿ 12 ಸಾವಿರ ವೀಕ್ಷಣೆ ಪಡೆದ ಹಾಡಿನ ಈ ಸಾಧನೆಯನ್ನು ಇದರ ಮೂಲ ಗಾಯಕರಾದ ದುಲ್ಹನ್ ತಮ್ಮ ಇನ್ಸ್ಟ ಪೇಜ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ, ಟ್ರಸ್ಟಿ ಶ್ರೀ ವಿವೇಕ್ ಆಳ್ವ, ಪ್ರಾಂಶುಪಾಲ ಡಾ. ಕುರಿಯನ್ ಹಾಗೂ ಮಾನವ ಸಂಪನ್ಮೂಲ ವಿಭಾಗದ ಡೀನ್ ಸಂಧ್ಯಾ ಕೆ. ಎಸ್. ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಹೈಲೈಟ್ಸ್:
ಹಾಡು ಯೂಟ್ಯೂಬ್ ಅಲ್ಲಿ ಅಪ್ಲೋಡ್ ಆದ ಎರಡೇ ದಿನದಲ್ಲಿ 12 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದು ದಾಖಲೆ
ಮೂಲ ಗಾಯಕ ದುಲ್ಹನ್ ತಮ್ಮ ಇನ್ಸ್ಟಾ ಪೇಜ್ ನಲ್ಲಿ ಅಸೀಮ ಅವರ ಹಾಡು ಭಾರತ ಹಾಗೂ ಶ್ರೀಲಂಕಾ ದೇಶಗಳ ನಡುವಿನ ಬಾಂಧವ್ಯ ಹೆಚ್ಚಿಸಿದಂತೆ ಶ್ಲಾಘನೆ