ಮಂಗಳೂರಿನಲ್ಲಿ ಕಳೆದ ಕೆಲವು ಸಮಯಗಳಿಂದ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಕಾರ್ಯಪಡೆ ರಚಿಸುವಂತೆ ದುರ್ಗಾವಾಹಿನಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ಕಳೆದ ತಿಂಗಳುಗಳಿಂದ ಕೆಲಸ ಬಿಟ್ಟು ಮನೆಗೆ ಹೋಗುವ ಮಹಿಳೆಯರ ಮೈಮೇಲಿನ ಚಿನ್ನದ ಆಭರಣಗಳನ್ನು ಕಸಿಯುವ ಕೆಲಸ, ಅಲ್ಲದೆ ಅವರ ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ಕೊಡುವ ಕೆಲಸ ನಡೆಯುತ್ತಿದೆ. ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಹಾಕುವ ಕೃತ್ಯಗಳು ನಡೆಯುತ್ತಿವೆ ಎಂದು ದುರ್ಗಾವಾಹಿನಿ ಆತಂಕ ವ್ಯಕ್ತಪಡಿಸಿದೆ.
ಅಪ್ರಾಪ್ತ ಬಾಲಕಿಯರಿಗೆ ಫೋನ್ ಮೂಲಕ ಲೈಂಗಿಕ ಕಿರುಕುಳ ಹೆಚ್ಚಾಗುತ್ತಿದೆ. ಈ ಕೃತ್ಯಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಶೀಲಿಸಿ ಆಯುಕ್ತರ ನೇತೃತ್ವದಲ್ಲಿ ಮಹಿಳಾ ಸುರಕ್ಷತೆಗೆ ಕಾರ್ಯ ಪಡೆಯನ್ನು ರಚಿಸಿ ಮಹಿಳೆಯರ ರಕ್ಷಣೆ ಮಾಡಬೇಕೆಂದು ದುರ್ಗಾ ವಾಹಿನಿ ಮುಖಂಡರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ವಿಭಾಗ ಮಾತೃಶಕ್ತಿ ಪ್ರಮುಖ್ ಸುರೇಖಾ ರಾಜ್, ಜಿಲ್ಲಾ ಮಾತೃಶಕ್ತಿ ಸಹಪ್ರಮುಖ್ ನಯನ ತೇಜ್, ದುರ್ಗಾವಾಹಿನಿ ಜಿಲ್ಲಾ ಸಂಚಾಲಕಿ ಶ್ವೇತಾ ಅದ್ಯಪಾಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
