ಮಂಗಳೂರು: "ಗಾಂಧೀಜಿಯನ್ನು ಬಿಟ್ಟಿಲ್ಲ, ನಿಮ್ಮನ್ನು ಬಿಡುತ್ತೇವಾ" ಎಂದು ರಾಜ್ಯ ಸರಕಾರದ ವಿರುದ್ಧ ಬೆದರಿಕೆ ಒಡ್ಡಿರುವ ಹಿಂದೂ ಮುಖಂಡನ ಮೇಲೆ ನಗರದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಖಿಲ ಭಾರತ ಹಿಂದೂ ಮಹಾ ಸಭಾದ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಅವರ ಮೇಲೆ ಪ್ರಕರಣ ದಾಖಲಾಗಿದೆ.
ಮೈಸೂರಿನಲ್ಲಿ ದೇವಸ್ಥಾನ ಕೆಡವಿರುವ ಹಿನ್ನೆಲೆಯಲ್ಲಿ ಖಾಸಗಿ ಹೊಟೇಲೊಂದರಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಅಖಿಲ ಭಾರತ ಹಿಂದೂ ಮಹಾ ಸಭಾದ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ, "ನಾವು ಗಾಂಧೀಜಿಯವರನ್ನೇ ಬಿಟ್ಟಿಲ್ಲ ಇನ್ನು ಹಿಂದೂ ಧರ್ಮಕ್ಕೆ ವಿರುದ್ಧವಾಗಿರುವವರನ್ನು ಬಿಡುತ್ತೇವಾ" ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. 
ಈ ಬಗ್ಗೆ ಲೋಹಿತ್ ಸುವರ್ಣ ಅವರು ಸರಕಾರಕ್ಕೆ ಬೆದರಿಕೆ ಒಡ್ಡಿದ್ದಾರೆಂದು ನಗರದ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.