Gram Panchayath officer recruitment- ರಾಜ್ಯದ ಗ್ರಾ. ಪಂ. ಕಾರ್ಯದರ್ಶಿ, ಎಸ್‌ಡಿಎಎ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ




ಗ್ರಾಮ ಪಂಚಾಯತ್‌ ಕಾರ್ಯದರ್ಶಿ (ಗ್ರೇಡ್ -೨) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ (SDAA) ಹುದ್ದೆಗಳಿಗೆ ಗ್ರಾಮ ಪಂಚಾಯತ್ ವೃಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.



ಕೋವಿಡ್ ಕಾರಣದಿಂದ ಈ ನೇಮಕಾತಿ ಸ್ಥಗಿತಗೊಂಡಿತ್ತು. ಇದೀಗ ಅದಕ್ಕೀಗ ಅಡ್ಡಿಯನ್ನು ಸರ್ಕಾರ ತೆರವುಗೊಳಿಸಿದೆ. ಹಲವು ವರ್ಷಗಳಿಂದ ಪದೋನ್ನತಿಗೆ ಕಾಯುತ್ತಿರುವ ಗ್ರಾಮ ಪಂಚಾಯತ್ ನ ವಿವಿಧ ವೃಂದಗಳ ಸಿಬ್ಬಂದಿಗಳ ಕನಸು ನನಸಾಗಲಿದೆ.



ಗ್ರಾಮ ಪಂಚಾಯತ್‌ ಕಾರ್ಯದರ್ಶಿ (ಗ್ರೇಡ್ -೨) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ (SDAA) ಹುದ್ದೆಗಳಿಗೆ ಬಿಲ್ ಕಲೆಕ್ಟರ್, ಲೆಕ್ಕಾಧಿಕಾರಿ, ಕ್ಲರ್ಕ್‌, ಟೈಪಿಸ್ಟ್, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ವೃಂದದ ಹುದ್ದೆಗಳಿಂದ ನೇರ ನೇಮಕಾತಿ ಪ್ರಕ್ರಿಯೆ ತಕ್ಷಣದಿಂದ ಆರಂಭವಾಗಲಿದೆ.



ಸಿಬ್ಬಂದಿಯ ಜ್ಯೇಷ್ಠಾತಾ ಪಟ್ಟಿ ಸಿದ್ದಪಡಿಸಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೀಸಲಾತಿ ನಿಯಮದ ಪ್ರಕಾರ ಆಯ್ಕೆ ಪಟ್ಟಿ ತಯಾರಿಸಲಾಗುವುದು. ಉಳಿದ ಶೇಕಡಾ 30ರಷ್ಟು ಖಾಲಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನೇರ ನೇಮಕಾತಿ ಮಾಡಲಾಗುವುದು.



ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ಶೇ. 50ರಷ್ಟು ಹುದ್ದೆಗಳನ್ನು 1:1 ಅನುಪಾತದಲ್ಲಿ ನೇಮಕ ಮಾಡಿಕೊಳ್ಳಲು ಅವಕಾಶ ಇದೆ. ಉಳಿದ ಶೇ. 50ರಷ್ಟು ಖಾಲಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನೇರ ನೇಮಕಾತಿ ಮಾಡಲಾಗುವುದು.

ಗ್ರಾಮ ಪಂಚಾಯತ್‌ಗಳಲ್ಲಿ ಕನಿಷ್ಟ ಆರು ವರ್ಷ ಕೆಲಸ ಮಾಡಿದ ಸಿಬ್ಬಂದಿ ನೇರ ನೇಮಕಾತಿಗೆ ಅರ್ಹತೆ ಪಡೆದುಕೊಳ್ಳಲಿದ್ದಾರೆ.