ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ: ಅಕ್ಟೋಬರ್ 15ಕ್ಕೆ ಕೊನೆ ದಿನ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದಾಖಲೆಗಳ ವಿವರ ಈ ಕೆಳಗಿನಂತಿದೆ.
ಅರ್ಜಿದಾರರ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು ಕನಿಷ್ಟ 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವ ಇರುವ ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ, ಅವಧಿ ಮತ್ತು ಅನುಭವಗಳ ಬಗ್ಗೆ ಪುರಾವೆಗಳನ್ನು ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಅಕ್ಟೋಬರ್ 15ರಂದು ಕೊನೆಯ ದಿನವಾಗಿರುತ್ತದೆ.
ಅರ್ಜಿಯು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಕಾನೂನು ಶಾಖೆಯಲ್ಲಿ ಲಭ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

