-->
Kudroli Ganesh - ಅಂತಾರಾಷ್ಟ್ರೀಯ ಖ್ಯಾತಿಯ ಜಾದೂಗಾರ ಕುದ್ರೋಳಿ ಗಣೇಶ್‌ಗೆ "ಕಮಲ ಪತ್ರ" ಪ್ರಶಸ್ತಿ

Kudroli Ganesh - ಅಂತಾರಾಷ್ಟ್ರೀಯ ಖ್ಯಾತಿಯ ಜಾದೂಗಾರ ಕುದ್ರೋಳಿ ಗಣೇಶ್‌ಗೆ "ಕಮಲ ಪತ್ರ" ಪ್ರಶಸ್ತಿಮಂಗಳೂರಿನ ವಿಶ್ವಖ್ಯಾತಿಯ ಯಕ್ಷಿಣಿ ಮಾಂತ್ರಿಕ ಕುದ್ರೋಳಿ ಗಣೇಶ್‌ ಮುಡಿಗೆ ಮತ್ತೊಂದು ಪ್ರಶಸ್ತಿ ಒಲಿದಿದೆ.ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಜ್ಯೂನಿಯರ್ ಚೇಂಬರ್ ಇಂಟರ್ ನ್ಯಾಷನಲ್ (ಜೆಸಿಐ) ಕುದ್ರೋಳಿ ಗಣೇಶ್ ಅವರಿಗೆ ಪ್ರತಿಷ್ಠಿತ 'ಕಮಲ ಪತ್ರ' ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.ಮಂಗಳೂರಿನ ಕದ್ರಿಯ ಲಯನ್ಸ್ ಅಶೋಕ ಸೇವಾ ಭವನದಲ್ಲಿ ನಡೆದ ಸಮಾರಂಭದಲ್ಲಿ ವಲಯ 15 ರ ಅಧ್ಯಕ್ಷರಾದ ಜೆಸಿಐ ಸೆನೆಟರ್ ಸೌಜನ್ಯ ಹೆಗ್ಡೆ ಇವರು ಗಣೇಶ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಿದರು.


ವಲಯ ಉಪಾಧ್ಯಕ್ಷರಾದ ದರ್ಶಿತ್ ಆರ್ ಶೆಟ್ಟಿ , ಜೆಸಿಐ ಲಾಲ್ ಬಾಗ್ ಘಟಕದ ಅಧ್ಯಕ್ಷರಾದ ಪ್ರಶಾಂತ್ ಬಿ ಶೆಟ್ಟಿ, ಘಟಕದ ಸ್ಥಾಪಕ ಅಧ್ಯಕ್ಷರಾದ ಪೀಟರ್ ಆಂಟನಿ ಪಿಂಟೋ, ನಿಕಟಪೂರ್ವ ಅಧ್ಯಕ್ಷರಾದ ಪ್ರಿನ್ಸ್ ಪಿಂಟೋ, ಮುಂದಿನ ಸಾಲಿನ ಅಧ್ಯಕ್ಷರಾದ ಪ್ರವೀಣ್ ಉಡುಪ ಮುಂತಾದವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article