
ಮೈಸೂರು ಕರಿಘಟ್ಟ ಬೆಟ್ಟದಲ್ಲಿ ವಿಹರಿಸುತ್ತಿದ್ದ ಪ್ರೇಮಿಗಳಿಗೆ ಎಚ್ಚರಿಕೆ ನೀಡಿ ಹಿಂದೆ ಕಳುಹಿಸಿದ ಪೊಲೀಸರು
9/18/2021 02:26:00 AM
ಶ್ರೀರಂಗಪಟ್ಟಣ: ಇತ್ತೀಚಿಗೆ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಬಳಿಕ ಪೊಲೀಸರು ಪ್ರೇಮಿಗಳು ವಿಹರಿಸುವ ತಾಣಗಳಲ್ಲಿ ಹದ್ದಿನ ಕಣ್ಣಿರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಪ್ರವಾಸಿತಾಣ ಕರಿಘಟ್ಟದಲ್ಲಿ ವಿಹರಿಸುತ್ತಿದ್ದ ಪ್ರೇಮಿಗಳಿಗೆ ಶ್ರೀರಂಗಪಟ್ಟಣ ಪೊಲೀಸರು ಎಚ್ಚರಿಕೆ ನೀಡಿ ಜಾಗೃತಿ ಮೂಡಿಸಿ ವಾಪಸ್ ಕಳಿಸಿದ ಘಟನೆ ನಡೆದಿದೆ.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಆಯಕಟ್ಟಿನ ಸ್ಥಳಗಳಲ್ಲಿ ರೌಂಡ್ಸ್ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರಿಘಟ್ಟ ಬೆಟ್ಟದಲ್ಲಿ ಶ್ರೀರಂಗಪಟ್ಟಣ ಪೊಲೀಸ್ ಇನ್ಸ್‌ಪೆಕ್ಟರ್ ರೇಖಾ ಹಾಗೂ ಅಪರಾಧ ದಳದ ಇನ್ಸ್‌ಪೆಕ್ಟರ್ ಸುನೀಲ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದೆ. ಈ ಸಂದರ್ಭ ಬೆಟ್ಟದಲ್ಲಿ ವಿಹರಿಸುತ್ತಿದ್ದ ಪ್ರೇಮಿಗಳಿಗೆ ಎಚ್ಚರಿಕೆ ನೀಡಿ ಇಂತಹ ನಿರ್ಜನ ಸ್ಥಳಗಳಿಗೆ ಬರದಂತೆ ಜಾಗೃತಿ ಹೇಳಿ ವಾಪಸ್ ಕಳಿಸಿದ್ದಾರೆ.