ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ..! ಯುವಕನ ಬಂಧನ..

ಚಿಕ್ಕಮಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿರುವ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಸಮೀಪದ ಹೆಡತಾಳ್ ಗ್ರಾಮದಲ್ಲಿ  ನಡೆದಿದೆ.

ನಿಡುವಾಳೆ ಸಮೀಪದ ಹೆಡತಾಳ್ ಗ್ರಾಮದ ವ್ಯಕ್ತಿಯೊಬ್ಬ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.