-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರಿನ ಯುವತಿ ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ

ಮಂಗಳೂರಿನ ಯುವತಿ ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ



ಮಂಗಳೂರು: ಮಂಗಳೂರಿನ ಯುವತಿ ರುತ್ ಕ್ಲ್ಯಾರ್ ಡಿಸಿಲ್ವ ಅವರು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ (ಚಾರ್ಟರ್ಡ್ ಅಕೌಂಟೆಂಟ್) ಪರೀಕ್ಷೆಯಲ್ಲಿ   ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ.





 ರಾಷ್ಟ್ರ ಮಟ್ಟದಲ್ಲಿ ರುತ್‌ ಅವರು ಪ್ರಥಮ ರ‍್ಯಾಂಕ್ ಪಡೆದಿದ್ದು ಪ್ರಥಮ ರ‌್ಯಾಂಕ್ ಪಡೆದ ಮೊದಲಿಗರು ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.ಇವರು ಮಂಗಳೂರಿನ ರೋಸಿ ಮಾರಿಯಾ ಡಿಸಿಲ್ವಾ ಮತ್ತು ರಫರ್ಟ್ ಡಿಸಿಲ್ವಾ ದಂಪತಿಗಳ ಪುತ್ರಿಯಾಗಿದ್ದಾರೆ.


ರುತು ಅವರು ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದು ಹೊಸ ದಾಖಲೆ ಮಾಡಿದ್ದಾರೆ. ಕೆಲವು ವರ್ಷಗಳಿಂದ ಪರೀಕ್ಷೆಯನ್ನು ಎದುರಿಸಿದ್ದ ಆಕೆ ಮತ್ತೆ ಮತ್ತೆ ಪರೀಕ್ಷೆಯನ್ನು ಎದುರಿಸಿ ಈ ಸಾಧನೆ ಮಾಡಿದ್ದಾರೆ .  ಇವರಿಗೆ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ (ಸಿಐಎಲ್)ನ ಸಂಚಾಲಕ ನಂದಗೋಪಾಲ್ ಮಾರ್ಗದರ್ಶನವನ್ನು , ವಿವಿಯನ್ ಅವರು ತರಭೇತಿಯನ್ನು ನೀಡಿದ್ದರು.



ರುತ್ ಅವರ ಸಾಧನೆ ಆಕೆಯ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.   ರುತ್ ಕ್ಲ್ಯಾರ್ ಅವರು 3ನೆ ಪ್ರಯತ್ನದಲ್ಲಿ ಪ್ರಥಮ ರ‌್ಯಾಂಕ್ ಪಡೆದಿರುವುದು  ಪೋಷಕರು, ಮಾರ್ಗದರ್ಶಕರು ಹಾಗೂ ತರಬೇತುದಾರರ ಸಂತಸಕ್ಕೆ ಕಾರಣವಾಗಿದೆ.
 

ರುತ್ ಡಿಸಿಲ್ವಾರಿಗೆ ನಾಲ್ಕು ವರ್ಷಗಳ ಹಿಂದೆ ಸಿಪಿಟಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದರು. ಸೈಂಟ್ ತೆರೆಸಾದಲ್ಲಿ ಶಾಲಾ ವಿದ್ಯಾಭ್ಯಾಸ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ದೂರ ಶಿಕ್ಷಣದಿಂದ ಪದವಿ ಶಿಕ್ಷಣವನ್ನು ಇವರು ಪಡೆದಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ