
Siddaramaiah reax on temple demolition - ಮೈಸೂರು ದೇವಸ್ಥಾನ ಧ್ವಂಸ: ಟ್ವೀಟ್ ಮೂಲಕ ಸಿದ್ದರಾಮಯ್ಯ ಪ್ರತಿಕ್ರಿಯೆ ಹೇಗಿತ್ತು..?
ಮೈಸೂರು ದೇವಸ್ಥಾನ ಧ್ವಂಸ: ಟ್ವೀಟ್ ಮೂಲಕ ಸಿದ್ದರಾಮಯ್ಯ ಪ್ರತಿಕ್ರಿಯೆ ಹೇಗಿತ್ತು..?
ಹಿಂದೂಗಳ ಹಬ್ಬದ ಸಂಭ್ರಮದಲ್ಲೇ ಮೈಸೂರಿನ ಹಿಂದೂ ದೇವಸ್ಥಾನ ಧ್ವಂಸ ಮಾಡಿದ ಘಟನೆಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ಘಟನೆಗೆ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ, ಇದೊಂದು ಹಿಂದೂ ಭಾವನೆಗಳ ವಿರುದ್ಧದ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವಸ್ಥಾನದ ಧ್ವಂಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿರುವ ಸಿದ್ದರಾಮಯ್ಯ, ಟ್ವೀಟ್ ಮೂಲಕ ಟೀಕಾ ಪ್ರಹಾರ ಮಾಡಿದ್ದಾರೆ.
ಪುರಾತನವಾಗಿರುವ ಈ ಹಿಂದೂ ದೇವಾಲಯವನ್ನು ಏಕಾಏಕಿ ಕೆಡವಿದ್ದು ಸರಿಯಲ್ಲ, ಇದು ಖಂಡನೀಯ. ಹಿಂದೂ ಭಾವನೆಗಳ ವಿರುದ್ಧದ ಈ ಕೃತ್ಯಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿರುವ ಅವರು, ದೇವಾಲಯವನ್ನು ಮತ್ತೆ ನಿರ್ಮಾಣ ಮಾಡಲು ತಕ್ಷಣ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.