-->

VHP Protest- ದೇವಸ್ಥಾನ ಧ್ವಂಸ ಪ್ರಕರಣ: ಡಿಸಿ, ತಹಶೀಲ್ದಾರ್ ಅಮಾನತಿಗೆ ವಿಎಚ್‌ಪಿ ಆಗ್ರಹ, ಕರಾವಳಿಯಲ್ಲಿ ಪ್ರತಿಭಟನೆಗೆ ಕರೆ

VHP Protest- ದೇವಸ್ಥಾನ ಧ್ವಂಸ ಪ್ರಕರಣ: ಡಿಸಿ, ತಹಶೀಲ್ದಾರ್ ಅಮಾನತಿಗೆ ವಿಎಚ್‌ಪಿ ಆಗ್ರಹ, ಕರಾವಳಿಯಲ್ಲಿ ಪ್ರತಿಭಟನೆಗೆ ಕರೆ

  • ಮೈಸೂರು ಪುರಾತನ ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಹಿಂದೂ ಸಂಘಟನೆಗಳ ಆಕ್ರೋಶ
  • ರಾಜ್ಯಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಸರಕಾರದ ನಡೆಗೆ ವಿರೋಧ
  • ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ವಿಶ್ವ ಹಿಂದು ಪರಿಷತ್ ಬಜರಂಗದಳ ಖಂಡನೆ
  • ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ನಿರ್ಧಾರ





ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಆದಿಶಕ್ತಿ ಶ್ರೀ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಬಲವಂತದಿಂದ ಒಡೆದು ಹಾಕಿರುವ ಈ ಕೃತ್ಯವನ್ನು ಹಾಗು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಈ ನಡೆಯನ್ನು ವಿಶ್ವ ಹಿಂದು ಪರಿಷತ್ ಬಜರಂಗದಳ ತೀವ್ರವಾಗಿ ಖಂಡಿಸಿದೆ.



ತಕ್ಷಣ ಸರಕಾರ ದೇವಸ್ಥಾನಗಳನ್ನು ತೆರವುಗೊಳಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಮತ್ತು ಒಡೆದು ಹಾಕಿರುವ ದೇವಸ್ಥಾನವನ್ನು ಪುನರ್ನಿರ್ಮಾಣ ಮಾಡಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿದೆ.



ಈ ಕೃತ್ಯವನ್ನು ಮಾಡಿರುವ ಮೈಸೂರು ಜಿಲ್ಲಾಧಿಕಾರಿ ಹಾಗೂ ನಂಜನಗೂಡು ತಾಲ್ಲೂಕಿನ ತಹಶೀಲ್ದಾರರನ್ನು ಅಮಾನತುಗೊಳಿಸಬೇಕೆಂದು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದೆ.



ಈ ಬೇಡಿಕೆಯನ್ನು ಮುಂದಿಟ್ಟುಕೊಂಡು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ 16 ನೇ ಸೆಪ್ಟೆಂಬರ್ ಗುರುವಾರ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ.


ಇದರ ಭಾಗವಾಗಿ, ಮಂಗಳೂರಿನಲ್ಲಿ 16 ನೇ ಸೆಪ್ಟೆಂಬರ್ ಗುರುವಾರ ಬೆಳಿಗ್ಗೆ 11 ಗಂಟೆಗೆ ಕದ್ರಿ ಮಲ್ಲಿಕಟ್ಟೆ ದ್ವಾರದ ಬಳಿ ವಿಶ್ವ ಹಿಂದು ಪರಿಷತ್ ಬಜರಂಗದಳ ಪ್ರತಿಭಟನೆ ನಡೆಸಲಿದೆ ಎಂದು ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article