-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಂಟ್ವಾಳ ಗ್ಯಾಂಗ್ ರೇಪ್  COMPLETE STORY; 16 ವರ್ಷದ ಯುವತಿಗೆ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಆರೋಪಿ- ಲಾಡ್ಜ್ ನಲ್ಲೂ ಇದ್ದ ಒಬ್ಬ ಕೀಚಕ!

ಬಂಟ್ವಾಳ ಗ್ಯಾಂಗ್ ರೇಪ್ COMPLETE STORY; 16 ವರ್ಷದ ಯುವತಿಗೆ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಆರೋಪಿ- ಲಾಡ್ಜ್ ನಲ್ಲೂ ಇದ್ದ ಒಬ್ಬ ಕೀಚಕ!



ಮಂಗಳೂರು: ಬಂಟ್ವಾಳ ದ 16 ವರ್ಷದ ಯುವತಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಉಡುಪಿ ಜಿಲ್ಲೆಯ ಕಾಪು ನಿವಾಸಿ ಕೆ. ಎಸ್ ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಲಾಡ್ಜ್ ಸತೀಶ್, ಹಾಗೂ ಇದಾಯತ್ತುಲ್ಲ ಬಂಧಿತ ಆರೋಪಿಗಳು.


ಫೇಸ್ ಬುಕ್ ನಲ್ಲಿ ಯುವತಿಗೆ ಪರಿಚಯವಾಗಿದ್ದ ಆರೋಪಿ!


ಆರೋಪಿ  ಕೆ. ಎಸ್ ಶರತ್ ಶೆಟ್ಟಿ  ನೊಂದ ಬಾಲಕಿ ಯೊಂದಿಗೆ Facebook ನಲ್ಲಿ ಪರಿಚಯವಾಗಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ. ಈತ   ತನ್ನ ಸಂಬಂಧಿ ಮಾರುತಿ ಮಂಜುನಾಥ್ ಗೆ ಕೂಡ ಬಾಲಕಿಯನ್ನು ಪರಿಚಯ ಮಾಡಿಸಿಕೊಟ್ಟಿದ್ದ.  ಪರಿಚಯದ ಬಳಿಕ ಮಂಜುನಾಥ್  ಬಾಲಕಿ ಯೊಂದಿಗೆ ಸಲುಗೆಯಿಂದ ಇದ್ದು whatsapp ನಲ್ಲಿ ಅಶ್ಲೀಲ ವಿಡಿಯೋ ಚಾಟ್ ಮಾಡಿಕೊಂಡಿದ್ದ...


  ಆರೋಪಿ ಶರತ್ ಶೆಟ್ಟಿ ಶುಕ್ರವಾರ  ಬಾಲಕಿಯನ್ನು ಮಂಗಳೂರಿಗೆ ಬರುವಂತೆ ತಿಳಿಸಿದ್ದು ಅದರಂತರ ಬಾಲಕಿ ಬಸ್ ನಲ್ಲಿ ಮಂಗಳೂರಿಗೆ ಬಂದಿದ್ದಳು. ಮಂಗಳೂರಿನಲ್ಲಿ ಆರೋಪಿ ಶರತ್ ಶೆಟ್ಟಿ ಯನ್ನು ಭೇಟಿಯಾಗಿದ್ದ ವೇಳೆ ಈತ  ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ ನಲ್ಲಿ ವಿಶ್ರಾಂತಿ ಮಾಡೋಣ ಎಂದು  ಮಂಗಳೂರಿನ ಲಾಡ್ಜ್ ಒಂದಕ್ಕೆ ಕರೆದು ಕೊಂಡು ಹೋಗಿದ್ದಾನೆ. ಅಲ್ಲಿ   ಬಾಲಕಿಯನ್ನು ಅತ್ಯಾಚಾರ ಮಾಡಿ ತನ್ನ ಸ್ನೇಹಿತ ಇದಾಯತ್ತುಲ್ಲ ನಿಗೆ ಪೋನ್ ಮಾಡಿ ಒಂದು ಹುಡುಗಿ ಇದೆ ಲಾಡ್ಜ್ ಗೆ ಬರುವಂತೆ ತಿಳಿಸಿದ್ದಾನೆ.


 ಆರೋಪಿ ಇದಾಯತ್ತುಲ್ಲ ಲಾಡ್ಜ್ ಗೆ ತೆರಳಿ  ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ.  ಇದೇ ವೇಳೆ  ಸತೀಶ್  ಎಂಬಾತ ಆರೋಪಿಗಳಿಗೆ ಅತ್ಯಾಚಾರ ಏಸಗಲು ಲಾಡ್ಜ್ ನಲ್ಲಿ ಅವಕಾಶ ಮಾಡಿಕೊಟ್ಟಿದ್ದಲ್ಲದೇ ಬಾಲಕಿ ತಂಗಿದ್ದ ರೂಂಗೆ ತೆರಳಿ ಆಕೆಯ ಖಾಸಗಿ ಅಂಗಗಳನ್ನು ಮುಟ್ಟಿ ಲೈಂಗಿಕ ಶೋಷಣೆ ಮಾಡಿದ್ದಾನೆ. ಆ ಬಳಿಕ ನೊಂದ ಬಾಲಕಿ ಬಸ್ ಮೂಲಕ ಬಂಟ್ವಾಳಕ್ಕೆ ಬಂದಿದ್ದಾಳೆ.  


ಬಾಲಕಿ ಮೇಲೆ ಅತ್ಯಾಚಾರ ವೆಸಗಿದ ಆರೋಪದ ಮೇಲೆ ಆರೋಪಿಗಳಾದ ಕಾಪು ನಿವಾಸಿ ಕೆ. ಎಸ್ ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಲಾಡ್ಜ್ ಸತೀಶ್, ಹಾಗೂ ಇದಾಯತ್ತುಲ್ಲ ರವರುಗಳನ್ನು ಪೊಲೀಸರು ಬಂಧಿಸಿದ್ದಾರೆ.


 ಬಂಟ್ವಾಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: ಅ.ಕ್ರ 116/2021  ಕಲಂ: 366 (a), 376(D), 506 ಐಪಿಸಿ ಮತ್ತು ಕಲಂ: 04, 06 POCSO ಕಾಯ್ದೆ ಯಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದಲ್ಲಿ ಭಾಗಿಯಾದ  ಆರೋಪಿಗಳ ಪತ್ತೆಗೆ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. 

Ads on article

Advertise in articles 1

advertising articles 2

Advertise under the article

ಸುರ