-->
ಮಂಗಳೂರು: ದ.ಕ.ಜಿಲ್ಲಾಡಳಿತದಿಂದ ರಾಷ್ಟ್ರಧ್ವಜಕ್ಕೆ ಅಗೌರವ; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಲ್ಟಾ ಹಾರಿಸಿ ಎಡವಟ್ಟು!

ಮಂಗಳೂರು: ದ.ಕ.ಜಿಲ್ಲಾಡಳಿತದಿಂದ ರಾಷ್ಟ್ರಧ್ವಜಕ್ಕೆ ಅಗೌರವ; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಲ್ಟಾ ಹಾರಿಸಿ ಎಡವಟ್ಟು!

ಮಂಗಳೂರು: ನಗರದಲ್ಲಿ ದ.ಕ.ಜಿಲ್ಲಾಡಳಿತದಿಂದ ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿ ಅಗೌರವ ತೋರಿಸಿದ ಘಟನೆ ನಡೆದಿದೆ.
ದ.ಕ.ಜಿಲ್ಲಾಡಳಿತದಿಂದ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಇಂದು ಬೆಳಗ್ಗೆ ನಗರದ ನೆಹರೂ ಮೈದಾನದಲ್ಲಿ ಆಯೋಜನೆಗೊಂಡಿತ್ತು. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ರಾಷ್ಟಧ್ವಜವನ್ನು ಹಾರಿಸಿ, ಧ್ವಜ ವಂದನೆ ಸಲ್ಲಿಸಿದ್ದರು. ಆದರೆ ಆ ಬಳಿಕ‌ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಲಾಗಿದೆ ಎಂದು ತಿಳಿದು ಬಂದಿದೆ. ತಕ್ಷಣ ರಾಷ್ಟ್ರಧ್ವಜವನ್ನು ಇಳಿಸಿ ಮತ್ತೆ ಸರಿಪಡಿಸಿ ಹಾರಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರು, ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು.


Ads on article

Advertise in articles 1

advertising articles 2

Advertise under the article