Job- KSOU Recruitment 2021- ಕರ್ನಾಟಕ ರಾಜ್ಯ ಮುಕ್ತ ವಿವಿ: ಬೋಧಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ

ಕರ್ನಾಟಕ ರಾಜ್ಯ ಮುಕ್ತ ವಿವಿ: ಬೋಧಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ






ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮೈಸೂರು 2021-22ನೇ ಶೈಕ್ಷಣಿಕ ಸಾಲಿಗೆ 32 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.



ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಕುರಿತ ಅಧಿಸೂಚನೆಯನ್ನು ಓದಬಹುದು.




ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ನವೆಂಬರ್ 11, 2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.



ಖಾಲಿ ಹುದ್ದೆಗಳ ವಿವರ:


ಪ್ರಾಧ್ಯಾಪಕ - 7 ಹುದ್ದೆಗಳು


ಸಹಾಯಕ ಪ್ರಾಧ್ಯಾಪಕ - 25 ಹುದ್ದೆಗಳು


ಒಟ್ಟು 32 ಹುದ್ದೆಗಳು


ವಿದ್ಯಾರ್ಹತೆ:

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಪಿಹೆಚ್‌.ಡಿ, ಪದವಿ, ಸಿಎ, ಎಂ.ಎ, ಬಿ.ಎಡ್ ಮತ್ತು ಎಂ.ಎಡ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.


ವಯೋಮಿತಿ: 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.



ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.



ಆಯ್ಕೆ ಪ್ರಕ್ರಿಯೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.




ಅರ್ಜಿ ಶುಲ್ಕ: 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 750/-ರೂ ಮತ್ತು ಇತರೆ ಅಭ್ಯರ್ಥಿಗಳು 1,500/-ರೂ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 600/-ರೂ ಮತ್ತು ಇತರೆ ಅಭ್ಯರ್ಥಿಗಳು 1200/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.


ಅರ್ಜಿ ಸಲ್ಲಿಕೆ: 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ksoumysuru.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 11,2021ರೊಳಗೆ ತಲುಪಿಸಬೇಕಿರುತ್ತದೆ. (11-11-2021)


ಕಚೇರಿ ವಿಳಾಸ:

Registrar, 

Karnataka State Open University, 

Mukthagangothri, 

Mysuru - 570006, Karnataka. 


ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ Click:

https://ksoumysuru.ac.in/documents/Notification%20Copy%20(18.10.2021).pdf