Kannada considered in IBPS Exams: ಕನ್ನಡದಲ್ಲೂ ಐಬಿಪಿಎಸ್ ಪರೀಕ್ಷೆ: ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡ ಭಾಷಿಕರಿಗೆ ಮನ್ನಣೆ
ಐತಿಹಾಸಿಕ ನಿರ್ಧಾರವೊಂದರಲ್ಲಿ ಇನ್ನು ಮುಂಧೆ ಬ್ಯಾಂಕುಗಳ ಕ್ಲೆರಿಕಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಕನ್ನಡದಲ್ಲೂ ನಡೆಯಲಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸೇರಿದಂತೆ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ನೇಮಕ ನಡೆಯುವಾಗ ಇಂಗ್ಲಿಷ್ ಮತ್ತು ಹಿಂದಿ ಸಹಿತ ಆಯ್ದ ಭಾಷೆಗಳಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿತ್ತು.
ಸರ್ಕಾರ ಈ ಬಗ್ಗೆ ಹೊಸ ಆದೇಶ ಹೊರಡಿಸಿದ್ದು, ಈ ಆದೇಶದಿಂದ ದಿಂದ ಕನ್ನಡ ಭಾಷೆಗೆ ಮಾನ್ಯತೆ ದೊರೆತಿದೆ. ಕನ್ನಡ ಸಹಿತ 13 ಪ್ರಾದೇಶಿಕ ಭಾಷೆಗಳಿಗೆ IBPS ಪರೀಕ್ಷೆಯಲ್ಲಿ ಮಾತನ್ಯತೆ ದೊರೆತಿದೆ.
ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆ ಕನ್ನಡದಲ್ಲಿ ನಡೆಸಬೇಕೆಂಬ ಮನವಿ ಕುರಿತು ಪರಿಶೀಲನೆ ನಡೆಸಲು ಕೇಂದ್ರ ಹಣಕಾಸು ಸಚಿವಾಲಯ ತಜ್ಞರ ಸಮಿತಿಯ ನೇಮಿಸಿತ್ತು. ಈ ಸಮಿತಿಯ ಶಿಫಾರಸಿನ ಮೇರೆಗೆ ಆದೇಶ ಹೊರಡಿಸಲಾಗಿದೆ.
ಇದಕ್ಕೂ ಮೊದಲು, ಗ್ರಾಮೀಣ ಬ್ಯಾಂಕ್‌ಗಳ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇತ್ತು. ಈಗ ಅದು ರಾಷ್ಟ್ರೀಕೃತ ಬ್ಯಾಂಕ್‌ಗಳ ನೇಮಕಾತಿಗೂ ಅನ್ವಯವಾಗಲಿದೆ.
ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 3,000 ಕ್ಲರಿಕಲ್ ಹುದ್ದೆಗಳ ನೇಮಕಾತಿಗೆ ನಡೆಯಲಿದ್ದ ಐಬಿಪಿಎಸ್ ಪರೀಕ್ಷೆಗಳನ್ನು ಕಳೆದ ಜುಲೈನಲ್ಲಿ ತಡೆಹಿಡಿಯಲಾಗಿತ್ತು. ಆಗ ಉಂಟಾದ ಭಾಷಾ ವಿವಾದದ ನಂತರ ಸರ್ಕಾರ ಸಮಿತಿಯನ್ನು ರಚಿಸಿತ್ತು.
3,000 ಕ್ಲೆರಿಕಲ್ ಹುದ್ದೆಗಳ ಪೈಕಿ 407 ಹುದ್ದೆಗಳು ಕರ್ನಾಟಕದಲ್ಲಿವೆ. ಭಾರತೀಯ ಬ್ಯಾಂಕ್, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು UCO ಬ್ಯಾಂಕ್ಗಳಲ್ಲಿ ಕ್ಲರಿಕಲ್ ಹುದ್ದೆಗಳ ನೇಮಕಾತಿ ಮಾಡಲು ಅಧಿಸೂಚನೆಯನ್ನು ಹೊರರಡಿಸಲಾಗಿದೆ.
ಪ್ರಾದೇಶಿಕ ಭಾಷೆಗಳಲ್ಲಿ ಕ್ಲರಿಕಲ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರವು ಭವಿಷ್ಯದ ಎಸ್‌ಬಿಐ ಹುದ್ದೆಗಳಿಗೆ ಅನ್ವಯಿಸುತ್ತದೆ ಎಂದು ಸಮಿತಿಯು ಹೇಳಿದೆ.
ಈಗಾಗಲೇ ಜಾಹಿರಾತು ನೀಡಿರುವ ಖಾಲಿ ಹುದ್ದೆಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆ ಮತ್ತು ಅದಕ್ಕಾಗಿ ಪ್ರಾಥಮಿಕ ಪರೀಕ್ಷೆಗಳು ನಡೆದಿವೆ ಎಂದು ಪ್ರಕಟಿಸಿದಂತೆ ಹಣಕಾಸು ಸಚಿವಾಲಯದ ಹೇಳಿಕೆ ತಿಳಿಸಿದೆ.
ಭವಿಷ್ಯದಲ್ಲಿ 12 ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿಗಳು ಮತ್ತು ಇತರ ಜಾಹೀರಾತು ನೇಮಕಾತಿಗಳಲ್ಲಿ ಪ್ರಾದೇಶಿಕ ಭಾಷೆಗೆ ಮಾನ್ಯತೆ ನೀಡಲಾಗುತ್ತದೆ.
ಸಮಿತಿಯು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಗಣನೆಗೆ ತೆಗೆದುಕೊಂಡು ಅವರಿಗೆ ಸಮಾನ ಅವಕಾಶಗಳನ್ನು ನೀಡಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.