-->
ಪಾಕಿಸ್ತಾನದ ಪರ ಮಾತನಾಡಿದ ಚಿಕ್ಕಬಳ್ಳಾಪುರದ ಯುವಕನ  ಆಡಿಯೋ ವೈರಲ್: ಆರೋಪಿ ಅರೆಸ್ಟ್

ಪಾಕಿಸ್ತಾನದ ಪರ ಮಾತನಾಡಿದ ಚಿಕ್ಕಬಳ್ಳಾಪುರದ ಯುವಕನ ಆಡಿಯೋ ವೈರಲ್: ಆರೋಪಿ ಅರೆಸ್ಟ್

ಬೆಂಗಳೂರು: ಪಾಕಿಸ್ತಾನದ ಪರವಾಗಿ ಯುವಕನೋರ್ವ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದ್ದು, ಇದೀಗ ಆ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

ಈತ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ರೀತಿಯಲ್ಲಿ ಮಾತನಾಡಿರುವುದು ಆಡಿಯೋದಲ್ಲಿ ದಾಖಲಾಗಿದೆ.  ಇದೀಗ ಈ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೀಗ ಈ ಆಡಿಯೋವನ್ನು ಪರಿಶೀಲನೆ ನಡೆಸಿರುವ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಇಮ್ರಾನ್ ಎಂಬ ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇಮ್ರಾನ್​ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದ ಪರವಾಗಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದ. ಅದನ್ನು ನೋಡಿರುವ ಯುವಕನೋರ್ವನು ಆತನಿಗೆ ಕರೆ ಮಾಡಿ ಪ್ರಶ್ನಿಸಿದ್ದಾನೆ. ಇದರಿಂದ ಗರಂ ಆಗಿರುವ ಇಮ್ರಾನ್, ಪಾಕಿಸ್ತಾನದ ಪರವಾಗಿ ಮಾತನಾಡಿ, ಭಾರತದ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ಈ ಮೂಲಕ ಸಮಾಜದಲ್ಲಿ ಶಾಂತಿ ಕೆದಡುವ ರೀತಿಯಲ್ಲಿ ಮಾತನಾಡಿದ್ದನು. 

ಈ ಹಿನ್ನೆಲೆಯಲ್ಲಿ ಸಂಭಾಷಣೆಯ ಆಡಿಯೋ ಸಹಿತ ಹಿಂದೂ ಕಾರ್ಯಕರ್ತರು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ  ದೂರು ನೀಡಿದ್ದರು. ಈ ಹಿನ್ನೆಲೆ ಆಡಿಯೋ ಬಗ್ಗೆ ತನಿಖೆ ನಡೆಸಿ, ಶಾಂತಿ ಕದಡುವ ರೀತಿಯಲ್ಲಿ ಮಾತನಾಡಿದ್ದ ಯುವಕನ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

Ads on article

Advertise in articles 1

advertising articles 2

Advertise under the article