ಮಂಗಳೂರು: ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಹೃದಯಾಘಾತದಿಂದ ಮೃತ್ಯು

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ಧಾರ್ಥ್ ಜೆ. (41)ಯವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಮೂಲತಃ ಪುತ್ತೂರು ತಾಲೂಕಿನ ಈಶ್ವರಮಂಗಲದವರಾಗಿರುವ ಸಿದ್ಧಾರ್ಥ್ ಜೆ. ನಗರದ ಪೊಲೀಸ್ ಕ್ವಾರ್ಟ್ರಸ್‌ನಲ್ಲಿ ವಾಸವಿದ್ದರು. ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ಸಿದ್ಧಾರ್ಥ್ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಸಹೋದ್ಯೋಗಿಗಳು ಅವರನ್ನು ಮನೆಗೆ ಹೋಗಲು ತಿಳಿಸಿದ್ದರು. ಮನೆಗೆ ತೆರಳಿದ್ದ ಸಿದ್ಧಾರ್ಥ್ ಅವರಿಗೆ  ನಸುಕಿನ ಜಾವ 3 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ.

ತಕ್ಷಣ ಅವರನ್ನು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 

ಉರ್ವ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ಧಾರ್ಥ್ ಅವರು ಈ ಮೊದಲು ಮಂಗಳೂರು ದಕ್ಷಿಣ (ಪಾಂಡೇಶ್ವರ), ಸಂಚಾರ ಠಾಣೆ ಸಹಿತ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
BREAKING NEWS
Loading latest news...
Join our WhatsApp Channel Powered By : Online Pudu