Police Raid on ONYX- ಮಂಗಳೂರಿನ ಶ್ರೀಮಂತರ ವಿಲಾಸಿ ಪಬ್‌ಗೆ ಪೊಲೀಸ್ ರೇಡ್‌: ಓನಿಕ್ಸ್ ಪಬ್‌ ಮೇಲೆ ದಾಳಿ

ಮಂಗಳೂರಿನ ಶ್ರೀಮಂತರ ವಿಲಾಸಿ ಪಬ್‌ಗೆ ಪೊಲೀಸ್ ರೇಡ್‌: ಓನಿಕ್ಸ್ ಪಬ್‌ ಮೇಲೆ ದಾಳಿ





ಮಂಗಳೂರಿನ ಎಂ.ಜಿ ರಸ್ತೆಯಲ್ಲಿರುವ ಓನೆಕ್ಸ್ ಪಬ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.



ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆದಿದೆ.











ಅಬಕಾರಿ ಕಾಯ್ದೆ, ಕೆಪಿ ಆಕ್ಟ್ ಮತ್ತು ಎಪಿಡೆಮಿಕ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಪಬ್ ನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ತೆರೆಯಲಾಗುತ್ತಿತ್ತು.



ಜೋರಾದ ಧ್ವನಿವರ್ಧಕಗಳನ್ನು ಬಳಸಿ ಅಕ್ಕಪಕ್ಕದ ರಸ್ತೆ ವರೆಗೂ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು. ಪಬ್ ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವ ಬಗ್ಗೆ ವ್ಯಾಪಕ ದೂರು ಕೇಳಿಬಂದಿತ್ತು.



ಅಕ್ಕಪಕ್ಕದ ನಿವಾಸಿಗಳಿಗೆ, ಸುತ್ತಾಮುತ್ತಲಿನವರು, ವಿದ್ಯಾರ್ಥಿಗಳು, ಮತ್ತು ಸಮೀಪದಲ್ಲೇ ಇರುವ ದೇವಸ್ಥಾನಗಳಿಗೆ ಭಕ್ತರು ಹೋಗಿ ಬರುವುದಕ್ಕೆ ಸಂಜೆಯಿಂದಲೇ ಭಾರೀ ತೊಂದರೆಯಾಗುತ್ತಿತ್ತು ಎಂಬ ದೂರುಗಳು ಸಾಕಷ್ಟು ಕೇಳಿಬಂದಿತ್ತು.



ಸಾರ್ವಜನಿಕ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿತ್ತು. ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಲಾಗುತ್ತಿದೆ.