-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಅಣ್ಣನ ಪುತ್ರಿಯ ಬೆತ್ತಲೆ ಚಿತ್ರ ಸೆರೆ ಹಿಡಿದು ಲೈಂಗಿಕ ಕಿರುಕುಳ ನೀಡಿದ ಪಾಪಿ ಚಿಕ್ಕಪ್ಪ!

ಅಣ್ಣನ ಪುತ್ರಿಯ ಬೆತ್ತಲೆ ಚಿತ್ರ ಸೆರೆ ಹಿಡಿದು ಲೈಂಗಿಕ ಕಿರುಕುಳ ನೀಡಿದ ಪಾಪಿ ಚಿಕ್ಕಪ್ಪ!

ಶಿವಮೊಗ್ಗ: ಅಣ್ಣನ ಪುತ್ರಿಯ ಬೆತ್ತಲೆ  ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದು ಲೈಂಗಿಕ ಕಿರುಕುಳ ಕೊಟ್ಟಿರುವ ಪಾಪಿ ಚಿಕ್ಕಪ್ಪನೀಗ ಪೊಲೀಸ್ ಅತಿಥಿಯಾಗಿದ್ದಾನೆ.

ಸೊರಬ ತಾಲೂಕಿನಲ್ಲಿ ಪಾಪಿ ಚಿಕ್ಕಪ್ಪನೋರ್ವ ಈ ರೀತಿಯ ವಿಕೃತಿ ಮೆರೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತೇಜಪ್ಪ(38) ಎಂಬಾತನೇ ಮಗಳ ಸಮಾನಳಾದ ಅಣ್ಣನ ಪುತ್ರಿಯ ಮೇಲೆ ಕಣ್ಣು ಹಾಕಿದ ಆರೋಪಿ. ಅಲ್ಲದೆ ಆಕೆಯ ಬೆತ್ತಲೆ ದೃಶ್ಯವನ್ನು ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಮಾಡಿ ವಿಕೃತಿ ಮೆರೆದಿದ್ದಾನೆ.  

ಆರೋಪಿ ತೇಜಪ್ಪ 3 ದಿನಗಳ ಹಿಂದೆ ಈತ ಅಣ್ಣನ ಪುತ್ರಿಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಈ ಸಂದರ್ಭ ಅಪ್ರಾಪ್ತ ಬಾಲಕಿಯ ಬೆತ್ತಲೆ ಅಶ್ಲೀಲ‌ ದೃಶ್ಯವನ್ನು ಚಿತ್ರೀಕರಣ ಮಾಡಿದ್ದಾನೆ. ಬಳಿಕ ಆತ ಲೈಂಗಿಕ ಕಿರುಕುಳ ನೀಡಿದ್ದು, ಅದನ್ನೂ ಚಿತ್ರೀಕರಣ ಮಾಡಿಕೊಂಡಿದ್ದಾನೆ. ಬಳಿಕ ಈ ಎಲ್ಲಾ ವೀಡಿಯೋಗಳನ್ನೂ ಸಾಮಾಜಿಕ‌ ಜಾಲತಾಣದಲ್ಲಿ‌ ಅಪ್ಲೋಡ್ ಮಾಡಿದ್ದಾನೆ.

ಪ್ರಕರಣ‌ ಬಯಲಿಗೆ ಬರುತ್ತಿದ್ದಂತೆ ಆರೋಪಿ ತೇಜಪ್ಪ ತಲೆ ಮರೆಸಿಕೊಂಡಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು  ಸಿಪಿಐ ಮರುಳಸಿದ್ದಪ್ಪ ಹಾಗೂ ಪಿಎಸ್​ಐ ಪ್ರಶಾಂತ್ ನೇತೃತ್ವದ ತಂಡ ರಚಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌‌. ಈ ಬಗ್ಗೆ ತನಿಖೆ ಮುಂದುವರಿದಿದೆ.

Ads on article

Advertise in articles 1

advertising articles 2

Advertise under the article

ಸುರ