ಮಂಗಳೂರಿನಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ- ಕಾರಣ ಅಸ್ಪಷ್ಟ

 

 


ಮಂಗಳೂರು:  ಮಂಗಳೂರಿನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

 

ಕೇರಳದ ಕಾಸರಗೋಡುವಿನ ಕಾಡುಮೆನಿ ಯ ನೀನಾ (19) ಆತ್ಮಹತ್ಯೆ ಮಾಡಿಕೊಂಡವರು. ಇವರು ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ ಪ್ರಥಮ ವರ್ಷದ ನರ್ಸಿಂಗ್  ಕಾಲೇಜು ವಿದ್ಯಾರ್ಥಿನಿಯಾಗಿದ್ದಾರೆ.

 


ಇವರು ಆಸ್ಪತ್ರೆಯ ಹಾಸ್ಟೆಲ್ ನಲ್ಲಿ ವಾಸವಿದ್ದು  ಸೋಮವಾರದಂದು ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದುಕೊಂಡಿದ್ದರು. ಇದನ್ನು ನೋಡಿದ ಮತ್ತೋರ್ವ ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು.

 

ಬಳಿಕ ಇಬ್ಬರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ನೇಣು ಬಿಗಿದುಕೊಮಡಿದ್ದ ನೀನಾ ಇಂದು ಕೊನೆಯುಸಿರೆಳೆದಿದ್ದಾರೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.