ಶೌಚಾಲಯದ ಬಳಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣ: ಆರೋಪಿಗೆ ಕಾರಾಗೃಹ ಶಿಕ್ಷೆ, ದಂಡ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರ ಶೌಚಾಲಯದ ಬಳಿ ಮರೆಯಾಗಿ ನಿಂತು ಬಳಿ ವಿದ್ಯಾರ್ಥಿನಿಯರ ಫೋಟೊ ಮತ್ತು ವೀಡಿಯೋ ಚಿತ್ರೀಕರಣ ಮಾಡಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿದೆ.

ಆರೋಪಿ ಮಹಮ್ಮದ್ ಇರ್ಷಾದ್ ಎಂಬಾತನ 2017 ರಲ್ಲಿ ಕೃತ್ಯ ಎಸಗಿದ್ದ. ಈ ಬಗ್ಗೆ ಭಾರತೀಯ ದಂಡ ಸಂಹಿತೆ ಕಲಂ 354 (c) ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಅಂದಿನ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಚಂದ್ರಶೇಖರ್ ಎಚ್​. ಅವರು ತನಿಖೆ ನಡೆಸಿ ಸುಳ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. 

ವಿಚಾರಣೆಯನ್ನು ಕೈಗೆತ್ತಿಕೊಂಡ ಸುಳ್ಯ ನ್ಯಾಯಾಲಯದ ನ್ಯಾಯಾಧೀಶ ಸೋಮಶೇಖರ್ ಆರೋಪಿ ಇರ್ಷಾದ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಂದು ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಒಂದು ತಿಂಗಳ ಸಾದಾ ಕಾರಾಗೃಹವಾಸ ಅನುಭವಿಸುವಂತೆ ತೀರ್ಪಿನಲ್ಲಿ ಹೇಳಲಾಗಿದೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಬಾಲಕಿಗೆ ದಂಡದ ಮೊತ್ತದಲ್ಲಿ 8 ಸಾವಿರ ರೂ. ಪರಿಹಾರವಾಗಿ ನೀಡುವಂತೆಯೂ ತೀರ್ಪನಲ್ಲಿ ತಿಳಿಸಲಾಗಿದೆ. ಈ ಪ್ರಕರಣದಲ್ಲಿ ಸರಕಾರದ ಸರಕಾರಿ ಅಭಿಯೋಜಕ ಜನಾರ್ದನ್ ಬಿ. ವಾದವನ್ನು ಮಂಡಿಸಿದ್ದರು.
BREAKING NEWS
Loading latest news...
Join our WhatsApp Channel Powered By : Online Pudu