ಕನ್ನಡದ ಖ್ಯಾತ ನಟಿ ಭಾವನಾ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆ: ಟ್ವೀಟ್ ಮೂಲಕ ರಣದೀಪ್ ಸಿಂಗ್ ಸುರ್ಜೇವಾಲ್ ದೃಢ

ಬೆಂಗಳೂರು: ಕನ್ನಡದ ಖ್ಯಾತ ನಟಿ ಭಾವನಾ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.‌ ಭಾವನಾ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಅವರನ್ನು ಭೇಟಿಯಾಗಿ ಮತ್ತೆ ಕಾಂಗ್ರೆಸ್ ಗೆ ಸೇರಿಕೊಂಡಿದ್ದಾರೆ.

"ಕಾಂಗ್ರೆಸ್‌ನ ಮಾಜಿ ಕಾರ್ಯಕರ್ತೆಯಾಗಿದ್ದ, ಕನ್ನಡದ ನಟಿ ಭಾವನಾ ರಾಮಣ್ಣ ನನ್ನನ್ನು ಭೇಟಿಯಾಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಸೇರಿಕೊಂಡು, ಪಕ್ಷಕ್ಕಾಗಿ ದುಡಿಯುವ ಸಂಕಲ್ಪ ಮಾಡಿದ್ದಾರೆ. ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಪ್ರಾಬಲ್ಯ ಪಡೆಯಲಿದೆ ಎಂದು ನಾನು ನಿಶ್ಚಿತವಾಗಿ ಭಾವಿಸಿದ್ದೇನೆ, ಅವರಿಗೆ ಶುಭಾಶಯಗಳು" ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.


ಭಾವನಾ ಅವರು ಈ ಮೊದಲು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದವರು. ಆಗ ಅವರು ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿಯ ಅಧ್ಯಕ್ಷೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆ ಸಂದರ್ಭ ಚಿತ್ರದುರ್ಗದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಆ ಸಂದರ್ಭದಲ್ಲಿ ಟಿಕೆಟ್ ದೊರಕಿರಲಿಲ್ಲ. ಆದ್ದರಿಂದ‌ 2018ರಲ್ಲಿ ವಿಧಾನಸಭೆ ಚುನಾವಣೆಗೆ 2 ದಿನಗಳು ಇರುವಾಗ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.