-->

ಮಂಗಳೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಪ್ರಕರಣ- ಆರೋಪಿಗೆ ಶಿಕ್ಷೆ ಪ್ರಕಟ

ಮಂಗಳೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಪ್ರಕರಣ- ಆರೋಪಿಗೆ ಶಿಕ್ಷೆ ಪ್ರಕಟ

ಮಂಗಳೂರು  : ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರವೆಸಗಿದವನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ ಟಿಎಸ್‌ಸಿ -1 ನ್ಯಾಯಾಲಯದ ನ್ಯಾಯಾಧೀಶರು ಏಳು  ವರ್ಷಗಳ ಕಠಿನ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ . 


ಮಂಗಳೂರು ತಾಲೂಕು ಕೋಟೆಕಾರು ಗ್ರಾಮದ ದೇರಳಕಟ್ಟೆಯ ನಿವಾಸಿ ಇರ್ಫಾನ್ ( 28 ) ಶಿಕ್ಷೆಗೊಳಗಾದ‌ ಅಪರಾಧಿ . ಈತ 2014 ರಲ್ಲಿ ಪಿಯುಸಿ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ
ಲಾಡ್ಜ್ ನಲ್ಲಿ ಕೂಡಿ ಹಾಕಿ ಅತ್ಯಾಚಾರವೆಸಗಿದ ಬಗ್ಗೆ ದೂರು ದಾಖಲಾಗಿತ್ತು .

 ಇರ್ಫಾನ್ ಅಪ್ರಾಪ್ತ ಸಂತ್ರಸ್ತೆಯ ಪರಿಚಯ ಮಾಡಿಕೊಂಡು ಮೊಬೈಲ್ ನಲ್ಲಿ ಮಾತನಾಡುತ್ತಿದ್ದನು. ಬಳಿಕ ಪ್ರೀತಿ ಮಾಡುತ್ತಿರುವುದಾಗಿಯೂ , ಮದುವೆಯಾಗಬೇಕು ಎಂದು ಒತ್ತಾಯಿಸುತ್ತಿದ್ದನು . 2014 ರ ಆಗಸ್ಟ್‌ನಲ್ಲಿ ಪರೀಕ್ಷೆ ಬರೆಯಲೆಂದು ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತೆಯನ್ನು ನಾಟೆಕಲ್‌ನಲ್ಲಿ ತಡೆದು ನಿಲ್ಲಿಸಿ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಚಿಕ್ಕಮಗಳೂರಿನ ಲಾಡ್ಜ್‌ಗೆ ಕರೆದೊಯ್ದು ಅಲ್ಲಿ ಕೂಡಿ ಹಾಕಿ ಅತ್ಯಾಚಾರವೆಸಗಿದ್ದನು . ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆಯನ್ನು ಹಾಕಿದ್ದನು.

 ವಿದ್ಯಾರ್ಥಿನಿ ನಾಪತ್ತೆಯಾಗಿದ್ದ ಬಗ್ಗೆ ಆಕೆಯ ಹೆತ್ತವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು, ಬಳಿಕ ಪೊಲೀಸರು ಪತ್ತೆ ಹಚ್ಚಿ ಆರೋಪಿ ಇರ್ಫಾನ್ ನನ್ನು ಬಂಧಿಸಿದ್ದರು . ಆಗಿನ ಉಳ್ಳಾಲ ಇನ್‌ಸ್ಪೆಕ್ಟರ್ ಸವಿತ್ರ ತೇಜ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು . ನ್ಯಾಯಾಧೀಶೆ ಸಾವಿತ್ರಿ ವಿ . ಭಟ್ ಅವರು ವಿಚಾರಣೆ ನಡೆಸಿ ಈ ಪೂರಕ ಸಾಕ್ಷ್ಯಗಳನ್ನು ಪರಿಗಣಿಸಿ ಆರೋಪಿಯ ಅಪರಾಧ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ . 

ಅಪರಾಧಿಗೆ ಶಿಕ್ಷೆ;
ಅಪಹರಣ ಕೃತ್ಯಕ್ಕೆ 3 ವರ್ಷ ಸಜೆ ಮತ್ತು 5,000 ರೂ . ದಂಡ , ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 15 ದಿನ ಹೆಚ್ಚುವರಿ ಸಜೆ , ತಡೆದು ನಿಲ್ಲಿಸಿದ ಕೃತ್ಯಕ್ಕೆ 5 ತಿಂಗಳು ಸಜೆ ಮತ್ತು 1,000 ರೂ . ದಂಡ , ದಂಡ ಪಾವತಿಸಲು ತಪ್ಪಿದರೆ ಮತ್ತೆ 15 ದಿನ ಸಜೆ , ಕೊಲೆ ಬೆದರಿಕೆಯೊಡ್ಡಿರುವುದಕ್ಕೆ 1 ವರ್ಷ ಸಜೆ ಮತ್ತು 2,000 ರೂ . ದಂಡ , ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 2 ತಿಂಗಳು ಸಜೆ , ಅಪ್ರಾಪ್ತ ವಯಸ್ಕಳ ಮೇಲಿನ ಅತ್ಯಾಚಾರಕ್ಕೆ ಪೋಕ್ಸ್ ಕಾಯ್ದೆಯಡಿ 7 ವರ್ಷ ಸಜೆ ಮತ್ತು 15,000 - ರೂ . ದಂಡ , ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 2 ತಿಂಗಳ ಸಜೆ 

Ads on article

Advertise in articles 1

advertising articles 2

Advertise under the article