-->

ಮಂಗಳೂರು; ವಿಧಾನಪರಿಷತ್ ಗೆ ಕಾಂಗ್ರೆಸ್ ಪಕ್ಷದಿಂದ ಮಂಜುನಾಥ್ ಭಂಡಾರಿಗೆ ಟಿಕೆಟ್ ಫಿಕ್ಸ್

ಮಂಗಳೂರು; ವಿಧಾನಪರಿಷತ್ ಗೆ ಕಾಂಗ್ರೆಸ್ ಪಕ್ಷದಿಂದ ಮಂಜುನಾಥ್ ಭಂಡಾರಿಗೆ ಟಿಕೆಟ್ ಫಿಕ್ಸ್

ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ದಕ್ಷಿಣ ಕನ್ನಡ , ಉಡುಪಿ ಜಿಲ್ಲಾ ದ್ವಿಸದಸ್ಯ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಮಂಜುನಾಥ್ ಭಂಡಾರಿ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಪ್ರತಾಪ್ ಚಂದ್ರ ಶೆಟ್ಟಿ ಅವರು ಈ ಬಾರಿ ಸ್ಪರ್ಧಿಸಲು ನಿರಾಕರಿಸಿರುವುದರಿಂದ ಹಲವು ಮಂದಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು. 2014 ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಂಜುನಾಥ್ ಭಂಡಾರಿ ಈ ಬಾರಿ ವಿಧಾನಪರಿಷತ್ ಸದಸ್ಯ ಸ್ಥಾನದ ಆಕಾಂಕ್ಷಿಯಾಗಿದ್ದರು.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿಲ್ಲದಿದ್ದರೂ , ಕೇಂದ್ರ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೃಪಕಟಾಕ್ಷದಿಂದ ಮಂಜುನಾಥ್ ಭಂಡಾರಿ ಅವರಿಗೆ ಟಿಕೆಟ್ ದೊರೆತಿದೆ.  


ಮಂಗಳೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಶಶಿಧರ್ ಹೆಗ್ಡೆ ಕಾಂಗ್ರೆಸ್ ಟಿಕೆಟ್ ನ ಪ್ರಬಲ ಆಕಾಂಕ್ಷಿಯಾಗಿದ್ದರು.

Ads on article

Advertise in articles 1

advertising articles 2

Advertise under the article