-->
ಕಾಸರಗೋಡು: ನಾಪತ್ತೆಯಾಗಿದ್ದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಪ್ರಿಯಕರನೊಂದಿಗೆ ಪೊಲೀಸ್ ಠಾಣೆಗೆ ಹಾಜರು

ಕಾಸರಗೋಡು: ನಾಪತ್ತೆಯಾಗಿದ್ದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಪ್ರಿಯಕರನೊಂದಿಗೆ ಪೊಲೀಸ್ ಠಾಣೆಗೆ ಹಾಜರು

ಕಾಸರಗೋಡು: ನಾಪತ್ತೆಯಾಗಿದ್ದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಪ್ರಿಯಕರನೊಂದಿಗೆ ಪೊಲೀಸ್ ಠಾಣೆಗೆ ಹಾಜರಾಗಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. 

ಬೋವಿಕ್ಕಾನದ ಅಪ್ರಾಪ್ತ ವಿದ್ಯಾರ್ಥಿನಿಯೋರ್ವಳು ಮಂಗಳವಾರ ಬೆಳಗ್ಗಿನಿಂದ ನಾಪತ್ತೆಯಾಗಿದ್ದಳು. ಈಕೆ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿದ್ದು, ಆದರೆ ಕಾಲೇಜಿಗೆಂದು ಹೋದವಳು ಮನೆಗೆ ಹಿಂತಿರುಗಲಿಲ್ಲ. ಈ ಬಗ್ಗೆ ಮನೆಯವರು ಆದೂರು ಪೊಲೀಸರಿಗೆ ದೂರು ನೀಡಿದ್ದರು.

ಇದೇ ವೇಳೆ ನಾಪತ್ತೆಯಾಗಿರುವ ಯುವತಿ ಪೆರ್ಲದ ಬಳಿಯಲ್ಲಿರುವ ಪ್ರಿಯಕರನ ಜೊತೆ ಇರುವುದಾಗಿ ತಿಳಿದು ಬಂದಿತ್ತು. ಅಲ್ಲದೆ ಬುಧವಾರ ಬೆಳಗ್ಗೆ ಯುವತಿ ಹಾಗೂ ಪ್ರಿಯಕರ ಬದಿಯಡ್ಕ ಠಾಣೆಯಲ್ಲಿ ಹಾಜರಾಗಿದ್ದಾರೆ. 

ಈ ಬಗ್ಗೆ ಮಾಹಿತಿ ಪಡೆದ ಆದೂರು ಪೊಲೀಸರು ಬದಿಯಡ್ಕಕ್ಕೆ ಆಗಮಿಸಿ ಯುವತಿ ಮತ್ತು ಪ್ರಿಯಕರನನ್ನು ಆದೂರಿಗೆ ಕರೆದೊಯ್ತು ಸಮಗ್ರ ತನಿಖೆ ನಡೆಸುತ್ತಿದ್ದಾರೆ. 

Ads on article

Advertise in articles 1

advertising articles 2

Advertise under the article