-->
MLC Election: ಪರಿಷತ್ ಚುನಾವಣೆ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಆಶೀರ್ವಾದ ಪಡೆದ ರಾಜೇಂದ್ರ ಕುಮಾರ್

MLC Election: ಪರಿಷತ್ ಚುನಾವಣೆ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಆಶೀರ್ವಾದ ಪಡೆದ ರಾಜೇಂದ್ರ ಕುಮಾರ್

ಪರಿಷತ್ ಚುನಾವಣೆ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಆಶೀರ್ವಾದ ಪಡೆದ ರಾಜೇಂದ್ರ ಕುಮಾರ್

ಉಜಿರೆ: ತಾನು ಯಾವುದೇ ಕಾರ್ಯ ಪ್ರಾರಂಭಿಸುವಾಗ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ಹೆಗ್ಗಡೆಯವರ ಆಶೀರ್ವಾದ ಪಡೆಯುತ್ತೇನೆ. ಅದೇ ರೀತಿ ಇಂದು ಕೂಡಾ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿರುವುದಾಗಿ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.ಅವರು ಭಾನುವಾರ ಧರ್ಮಸ್ಥಳದಲ್ಲಿ ದೇವರ ದರ್ಶನ ಪಡೆದು ಹೆಗ್ಗಡೆಯವರ ಭೇಟಿಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.ಹೆಗ್ಗಡೆಯವರು ತಮಗೆ ಶುಭ ಹಾರೈಸಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಅಭಿಮಾನಿಗಳ ಒತ್ತಾಯದ ಮೇರೆಗೆ ತಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದು ಗೆಲುವಿನ ವಿಶ್ವಾಸವನ್ನು ಅವರು ವ್ಯಕ್ತ ಪಡಿಸಿದರು.ಎಲ್ಲರನ್ನೂ ಸಂಪರ್ಕಿಸುವ ವ್ಯವಸ್ಥೆ ಈಗಾಗಲೆ ಮಾಡಿದ್ದು ಸರ್ವರ ಸರ್ವಾಂಗೀಣ ಪ್ರಗತಿಗೆ ತಾನು ಶ್ರಮಿಸುವುದಾಗಿ ರಾಜೇಂದ್ರ ಕುಮಾರ್ ಅವರು ಭರವಸೆ ನೀಡಿದರು.

Ads on article

Advertise in articles 1

advertising articles 2

Advertise under the article